ಮುಫ್ತಿ ಸಯೀದ್ ನಿಧನ: 7 ದಿನ ಶೋಕಾಚರಣೆ ಘೋಷಿಸಿದ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಶೋಕಾಚರಣೆ ವ್ಯಕ್ತವಾಗಿದ್ದು, ಏಳು ದಿನಗಳ ಕಾಲ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕ್ ಗಳು, ಸರ್ಕಾರಿ ಕಚೇರಿಗಳು...
ಮುಫ್ತಿ ಮೊಹಮ್ಮದ್ ಸಯೀದ್
ಮುಫ್ತಿ ಮೊಹಮ್ಮದ್ ಸಯೀದ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಶೋಕಾಚರಣೆ ವ್ಯಕ್ತವಾಗಿದ್ದು, ಏಳು ದಿನಗಳ ಕಾಲ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕ್ ಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ರ ನಿಧನದ ಹಿನ್ನೆಲೆಯಲ್ಲಿ ಜಮ್ಮು, ಕಾಶ್ಮೀರ ವಿಶ್ವವಿದ್ಯಾಲಯ ಹಾಗೂ ಎಲ್ಲಾ ಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲ್ಪಟ್ಟ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ವಿವಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸರ್ಕಾರ ಇದೀಗ ಏಳು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ಏಳು ದಿನಗಳ ಕಾಲ ಯಾವುದೇ ಸಾರ್ವಜನಿಕ, ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ. ಹಾಗೂ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡ ಹಾಗೂ ಸಂವಿಧಾನ ಆಡಳಿತ ಮಂಡಳಿಗಳ ಮೇಲಿರುವ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com