ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ಸ್ಥಗಿತ

ಪಠಾಣ್ ಕೋಟ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಜನವರಿ 15ಕ್ಕೆ ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಪಠಾಣ್ ಕೋಟ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಜನವರಿ 15ಕ್ಕೆ ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಅವರು ಗುರುವಾರ ಹೇಳಿದ್ದಾರೆ.
ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ. ಹೀಗಾಗಿ ಪಾಕಿಸ್ತಾನ ಮೊದಲು ಕ್ರಮ ತೆಗೆದುಕೊಳ್ಳಲಿ. ನಂತರ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ಬಗ್ಗೆ ನಿರ್ಧರಿಸಲಾಗುವುದು ಎಂದು ಸ್ವರೂಪ್ ಹೇಳಿದ್ದಾರೆ.
ಸದ್ಯ ಚೆಂಡು ಪಾಕಿಸ್ತಾನದ ಅಂಗಳದಲ್ಲಿದ್ದು, ಪಠಾಣ್ ಕೋಟ್ ದಾಳಿ ಬಗ್ಗೆ ಪಾಕಿಸ್ತಾನ ತಕ್ಷಣ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ವರೂಪ್ ತಿಳಿಸಿದ್ದಾರೆ.
ಈ ಮಧ್ಯೆ, ಈ ಸಂಬಂಧ ಇಂದು ನವಾಜ್ ಷರೀಫ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದು, ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಲಹೆಗಾರಿ ಸರ್ತಾಜ್ ಅಜಿಜ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com