ಮೆಹಬೂಬ ಮುಫ್ತಿ ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ?

ಜಮ್ಮು-ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದಿಂದಾಗಿ ಅವರ ಮಗಳು ಮೆಹಬೂಬ ಮುಫ್ತಿ ಅವರು...
ಜಮ್ಮು-ಕಾಶ್ಮೀರ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ
ಜಮ್ಮು-ಕಾಶ್ಮೀರ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ

ಶ್ರೀನಗರ: ಜಮ್ಮು-ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದಿಂದಾಗಿ ಅವರ ಮಗಳು ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಜಮ್ಮು-ಕಾಶ್ಮೀರ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹಿರಿಮೆಗೆ ಮೆಹಬೂಬ ಮುಫ್ತಿ ಪಾತ್ರರಾಗಿದ್ದಾರೆ.

ಜಮ್ಮು-ಕಾಶ್ಮೀರದ ಪಿಡಿಪಿ ಅವಿರೋಧವಾಗಿ ಮೆಹಬೂಬ ಅವರನ್ನು ಆಯ್ಕೆ ಮಾಡುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ ಎಂದು ಪಿಡಿಪಿ ಹಿರಿಯ ನಾಯಕ ಹಾಗೂ ಲೋಕಸಭಾ ಸದಸ್ಯ ಮುಝಾಫರ್ ಹುಸೇನ್ ಬೇಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೆಹಬೂಬ ಅವರು ಮುಖ್ಯಮಂತ್ರಿಯಾಗುವುದಕ್ಕೆ ಸರ್ಕಾರದಲ್ಲಿ ಮೈತ್ರಿಪಕ್ಷವಾಗಿರುವ ಬಿಜೆಪಿಯ ಒಪ್ಪಿಗೆ ಪಡೆಯಬೇಕಾಗಿದೆ.

ಬಿಜಪಿಯಿಂದ ಇದುವರೆಗೆ ಯಾವುದೇ ವಿರೋಧ ಕೇಳಿಬಂದಿಲ್ಲದಿದ್ದರೂ ಪಕ್ಷದ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಬೇಕಾಗಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯ 87 ಮಂದಿ ಸದಸ್ಯರಲ್ಲಿ ಪಿಡಿಪಿ 28 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 25, ವಿರೋಧ ಪಕ್ಷವಾದ ರಾಷ್ಟ್ರೀಯ ಕಾಂಗ್ರೆಸ್ 15 ಮತ್ತು ಕಾಂಗ್ರೆಸ್ 12 ಸ್ಥಾನಗಳನ್ನು ಹೊಂದಿವೆ.

ಕಳೆದ ವರ್ಷ ಪಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೆ, ಬೇಡವೇ ಎಂದು ನಿರ್ಧರಿಸಲು ಬಿಜೆಪಿ ತುಂಬಾ ಸಮಯ ತೆಗೆದುಕೊಂಡಿತ್ತು. ಆದರೆ ಈ ಬಾರಿ ಹಾಗಾಗುವುದಿಲ್ಲ. ಇದೇ ತಿಂದಳು 18ರಿಂದ ಬಜೆಟ್ ಅಧಿವೇಶನ ನಡೆಯಲಿರುವುದರಿಂದ ಆದಷ್ಟು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.

ಅತ್ಯಂತ ಸಿಟ್ಟಿನ ರಾಜಕಾರಣಿ ಎಂಬ ಭಾವನೆ ಬೆಳೆಸಿಕೊಂಡಿರುವ ಮೆಹಬೂಬ   1996ರಲ್ಲಿ ಕಾಂಗ್ರೆಸ್ ಪಕ್ಷ ಸೇರಿ ತಮ್ಮ ತಂದೆಯವರ ಜತೆ ರಾಜಕೀಯ ಜೀವನ ಆರಂಭಿಸಿದ್ದರು. 56 ವರ್ಷದ ಮೆಹಬೂಬ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದು, ಪಿಡಿಪಿಯ ಅಧ್ಯಕ್ಷೆ. ಅವರು ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ತಮ್ಮ ತವರು ಕ್ಷೇತ್ರ ಬಿಜ್ ಬೆಹಾರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com