ಜಮ್ಮು-ಕಾಶ್ಮೀರ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ವಿಧಿವಶ

ಶ್ವಾಸಕೋಶ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಗುರುವಾರ ನಿಧನರಾಗಿದ್ದಾರೆ...
ಮುಫ್ತಿ ಮೊಹಮ್ಮದ್ ಸಯೀದ್
ಮುಫ್ತಿ ಮೊಹಮ್ಮದ್ ಸಯೀದ್

ನವದೆಹಲಿ: ಶ್ವಾಸಕೋಶ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ 79 ವರ್ಷದ ಮುಫ್ತಿ ಮೊಹಮ್ಮದ್ ಸಯೀದ್ ಅವರು ಗುರುವಾರ ನಿಧನರಾಗಿದ್ದಾರೆ.

ಡಿಸೆಂಬರ್ 24ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮುಫ್ತಿ ಮೊಹಮ್ಮದ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ಪೀಪಲ್ ಡೆಮಾಕ್ರಿಕೆಟ್ ಪಾರ್ಟಿ ಅಧ್ಯಕ್ಷರಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ಕಳೆದ ಚುನಾವಣೆಯಲ್ಲಿ ಜಯಭೇರಿ ಪಡೆದಿದ್ದ ಪಿಡಿಪಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು,  ಮುಫ್ತಿ ಮುಖ್ಯಮಂತ್ರಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com