ಸಿಎಂ ಮುಫ್ತಿ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಅನಾರೋಗ್ಯದಿಂದ ನಿಧನರಾದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಛ ಅರ್ಪಿಸುವ ಮೂಲಕ...
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಅನಾರೋಗ್ಯದಿಂದ ನಿಧನರಾದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಛ ಅರ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು.

ಕಳೆದ 16 ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಫ್ತಿ ಇಂದು ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ನವದೆಹಲಿಯಿಂದ ಜಮ್ಮುವಿಗೆ ಕೊಂಡೊಯ್ಯುವ ಮುನ್ನ ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಪ್ರಧಾನಿ ಮೋದಿ ಪಾರ್ಥಿವ ಶರೀರಕ್ಕೆ ಹೂಗುಚ್ಛ ಅರ್ಪಿಸುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಈ ವೇಳೆ ಉಪಸ್ಥಿತರಿದ್ದರು.

ನಾಳೆ ಅಂತ್ಯಕ್ರಿಯೆ
ಮುಫ್ತಿ ಅವರ ಅಂತ್ಯಕ್ರಿಯೆಯು ಬಿಜ್ಬೆಹರಾದಲ್ಲಿರುವ ವಂಶಪಾರಂಪರಾಗತ ರುದ್ರಭೂಮಿಯಲ್ಲಿ ನಾಳೆ ನಡೆಯಲಿದೆ ಎಂದು ಪಿಡಿಪಿ ಪ್ರಧಾನ ಕಾರ್ಯದರ್ಶಿ ರಫಿ ಅಹಮದ್ ಮಿರ್ ತಿಳಿಸಿದ್ದಾರೆ. ಬಿಜ್ಬೆಹರಾ ಪಟ್ಟಣವು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com