ಜಲ್ಲಿಕಟ್ಟು ಆಚರಣೆಗೆ ಗ್ರೀನ್ ಸಿಗ್ನಲ್: ಪೇಟಾ ಖಂಡನೆ

ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟ ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟ ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಾಣಿದಯಾ ಸಂಘಟನೆ ಪೇಟಾ ಖಂಡಿಸಿದೆ. ಕೇಂದ್ರ ಸರ್ಕಾರದ ಈ ತೀರ್ಮಾನ ದೇಶಕ್ಕೆ ಕಪ್ಪು ಚುಕ್ಕೆಯಾಗಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಮ್ಮೆ ಈ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದೆ.

ಗೋವುಗಳನ್ನು ರಕ್ಷಿಸಬೇಕು ಎಂದು ಹೇಳುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಈ ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟದಂತಹ ಕ್ರೂರ ಪಂದ್ಯಕ್ಕೆ ಒಪ್ಪಿಗೆ ನೀಡಿರುವುದು ವಿಷಾದಕರ ಸಂಗತಿ ಎಂದು ಪೇಟಾ ಹೇಳಿದೆ.

ಪಂದ್ಯಗಳಲ್ಲಿ ಎತ್ತುಗಳನ್ನು ಬಳಸಬಾರದೆಂದು ಎಂದು ಪರಿಸರ ಸಚಿವಾಲಯ 2011ರಲ್ಲಿ ನಿಷೇಧಿಸಿತ್ತು. ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆಗಟ್ಟುವಿಕೆ ಕಾಯ್ದೆ 1960ರ ಪ್ರಕಾರ ಪಂದ್ಯಗಳಲ್ಲಿ ಎತ್ತುಗಳನ್ನು ಬಳಸುವುದು ಕಾನೂನುಬಾಹಿರವಾಗಿದೆ. ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸದಸ್ಯರೇ ಪದ್ಧತಿಗೆ ಪ್ರೋತ್ಸಾಹ ನೀಡುತ್ತಿರುವುದು ವಿಪರ್ಯಾಸ. ನಾವಿದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದು ಪೇಟಾ ಸಂಘಟನೆಯ ಭಾರತದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ವ ಜೋಶಿಪುರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com