ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಪಕ್ಷ ಬೆಂಬಲ ನೀಡಲು ನಿರ್ಧರಿಸಿದ ಹಿನ್ನಲೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಇಂದು ಅಲ್ಲಿನ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
79 ವರ್ಷದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದ ನಂತರ ಜಮ್ಮು, ಕಾಶ್ಮೀರ ಮುಖ್ಯಮಂತ್ರಿ ಹುದ್ದೆ ಖಾಲಿ ಇದ್ದು, ಆ ಸ್ಥಾನಕ್ಕೆ ಅವರ ಪುತ್ರಿ ಮೆಹಬೂಬಾ ಮುಫ್ತಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ನಿನ್ನೆಯಷ್ಟೇ ಬಿಜೆಪಿ ನಾಯಕ ಚೌಧರಿ ಲಾಲ್ ಸಿಂಗ್ ಅವರು, ಜಮ್ಮು, ಕಾಶ್ಮೀರ ಸಿಎಂ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ಅವರು ಅರ್ಹರಾಗಿದ್ದು, ಅವರು ಸಿಎಂ ಆಗುವುದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದರು.