
ನವದೆಹಲಿ: ವಿವಾದಿತ ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ನೋಡಬಾರದು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಶನಿವಾರ ಹೇಳಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಮ ಮಂದಿರ ನಿರ್ಮಾಣ ವಿಚಾರಣ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವೆಂಬ ದೃಷ್ಟಿಯಲ್ಲಿ ನೋಡಬಾರದು. ರಾಮ ಮಂದಿರ ಈ ವರ್ಷದಲ್ಲಿ ನಿರ್ಮಾಣವಾಗದಿದ್ದರೆ, ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಆಗಲೂ ಚುನಾವಣೆ ಬರುತ್ತದೆ. ಚುನಾವಣೆ ಇದ್ದ ಕಾರಣ ದೇಗುಲ ನಿರ್ಮಾಣವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತದೆ. ಚುನಾವಣಾ ಪ್ರಕ್ರಿಯೆಗಳು ಅದರ ಪಾಡಿಗೆ ಹೋಗುತ್ತಿರುತ್ತದೆ. ನಾನು ನಮ್ಮ ಕೆಲಸಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಜನರು ಅತೀ ಸೂಕ್ಷ್ಮತೆಯುಳ್ಳವರಾಗಿದ್ದು, ಅವರಿಗೆ ಚುನಾವಣಾ ಅಸ್ತ್ರಯಾವುದು, ಯಾವುದು ಅಲ್ಲ ಎಂಬುದರ ಬಗ್ಗೆ ಅವರಿಗೆ ಅರಿವಿರುತ್ತದೆ. ಶೇ.99 ರಷ್ಟು ಹಿಂದೂಗಳು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಬಯಸುತ್ತಿದ್ದಾರೆ. ಇದಕ್ಕೆ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿಲ್ಲ. ನಾವು ಯಾರ ವಿರುದ್ಧವೂ ಅಲ್ಲ ಎಂಬುದು ಅವರಿಗೂ ತಿಳಿದಿದೆ. ರಾಮ ದೇಗುಲ ನಿರ್ಮಾಣಕ್ಕೆ ಯಾವುದೇ ತೊಂದರೆಗಳಿಲ್ಲ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಸ್ವಾಮಿ ಅವರು ಇತ್ತ ವಿಚಾರ ಸಂಕಿರಣದಲ್ಲಿ ರಾಮ ದೇಗುಲ ನಿರ್ಮಾಣ ಕುರಿತಂತೆ ಮಾತನಾಡುತ್ತಿದ್ದರೆ, ವಿಶ್ವ ವಿದ್ಯಾಲಯದ ಹೊರಾಂಗಣದಲ್ಲಿ ವಿದ್ಯಾರ್ಥಿಗಳ ಸಂಘಟನೆಗಳಾದ ಎನ್ಎಸ್ ಯುಐ, ಎಐಎಸ್ಎ ಮತ್ತು ಕೆವೈಎಸ್ ಪ್ರತಿಭಟನೆ ನಡೆಸುತ್ತಿವೆ.
ಈ ಹಿಂದೆ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಅಯೋಧ್ಯಯಲ್ಲಿ ರಾಮ ದೇಗುಲವನ್ನು 2016ರಲ್ಲಿ ಮುಸ್ಲಿಂ ಸಮುದಾಯಗಳ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದರು.
Advertisement