

ನವದೆಹಲಿ: ಅನಿವಾಸಿ ಭಾರತೀಯರಿಗೂ ಇನ್ನು ಮುಂದೆ ಆಧಾರ್ ಕಾರ್ಡ್ ನೀಡಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಶನಿವಾರ ನಡೆದ ಪ್ರವಾಸಿ ಭಾರತೀಯ ದಿವಸ್ ಸಮಾರಂಭದಲ್ಲಿ ಮಾತನಾಡಿದ ಅವರು, 'ಇನ್ನು ಮುಂದೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಉದ್ಯೋಗ ಅರಸಿ ಹೋಗುವ ಮಹಿಳೆಯರನ್ನು ಸರ್ಕಾರದ ಮೂಲಕವೇ ಕಳುಹಿಸಲಾಗುತ್ತದೆ. ಏಜೆನ್ಸಿಗಳಿಗೆ ಸಿಲುಕಿ ಸಂಕಷ್ಟ ಅನುಭವಿಸುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆ ಅನಿವಾಸಿ ಭಾರತೀಯರಿಗೂ ಆಧಾರ್ ನೀಡಲು ನಿರ್ಧರಿಸಲಾಗಿದೆ,'' ಎಂದರು.