ದೆಹಲಿಯಲ್ಲಿ ಒಂದೇ ಕುಟುಂಬದ ಮೂವರ ಹತ್ಯೆ

ದೆಹಲಿಯ ರಾಜೇಂದ್ರ ನಗರದ ಮನೆಯೊಂದರಲ್ಲಿ ಭಾನುವಾರ ಒಂದೇ ಕುಟುಂಬದ ಮೂವರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ದೆಹಲಿಯ ರಾಜೇಂದ್ರ ನಗರದ ಮನೆಯೊಂದರಲ್ಲಿ ಭಾನುವಾರ ಒಂದೇ ಕುಟುಂಬದ ಮೂವರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ.
ಪತಿಯ ದೇಹ ಅವರ ಮನೆಯ ಕಪ್‌ಬೋರ್ಡ್‌ನಲ್ಲಿ ಪತ್ತೆಯಾಗಿದ್ದು, ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಯಾರಾದರು ಕೊಲೆ ಮಾಡಿದ್ದಾರೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
'ಮೃತರ ಮನೆಗೆ ದುಷ್ಕರ್ಮಿಗಳು ನುಗ್ಗಿರುವುದು ಪತ್ತೆಯಾಗಿದೆ' ಎಂದು ಜಂಟಿ ಪೊಲೀಸ್ ಆಯುಕ್ತ ಎಸ್.ಕೆ.ಗೌತಮ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇನ್ನು ಪತ್ನಿ ಹಾಗೂ ಪುತ್ರನ ಮೃತದೇಹ ಸಹ ಮನೆಯಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದ್ದು, ಅವರಿಬ್ಬರ ಕುತ್ತಿಗೆಯಲ್ಲಿ ಗಾಯಗಳು ಕಾಣಿಸಿಕೊಂಡಿವೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com