
ಸಾಗರ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಎಲ್ಲಾ ಅಪರಾಧ ಪ್ರಕರಣಗಳಿಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಕಾರಣ ಎಂದು ಎಎಪಿ ನಾಯಕಿ ಅಲಕಾ ಲಂಬಾ ಆರೋಪಿಸಿದ್ದಾರೆ.
ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಅಪರಾಧ ದಳದ ದಾಖಲೆಗಳ ಪ್ರಕಾರ, ದೇಶದಲ್ಲಿ ಮಹಿಳೆಯರ ವಿರುದ್ಧ ದೇಶದಲ್ಲಿ ಅತಿ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗುತ್ತಿರುವುದು ಮಧ್ಯ ಪ್ರದೇಶದಲ್ಲಿ ಎಂದು ಹೇಳಿದರು. ಮಧ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಸಿಎಂ ಶಿವರಾಜ್ ಚೌಹಾಣ್ ಹೊಣೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ, ಒಂದು ವೇಳೆ ದೆಹಲಿ ಪೊಲೀಸ್ ಇಲಾಖೆ ಎಎಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಿದರೇ, ದೆಹಲಿಯ ಸ್ಥಿತಿಯೇ ಬದಲಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣದಲ್ಲಿ ಹಲವಾರು ಮಂದಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ತರಾಟೆಗೆ ತೆಗೆದುಕೊಂಡರು.
Advertisement