ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ

ರಾಮ ಮಂದಿರ ನಿರ್ಮಾಣ: 100 ಕೋಟಿ ಹಿಂದೂಗಳು ನ್ಯಾಯಾಲಯದ ಆದೇಶಕ್ಕಾಗಿ ಕಾಯುವುದಿಲ್ಲ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನ್ಯಾಯಾಲಯ ಆದೇಶ ನೀಡುವವರೆಗೆ 100 ಕೋಟಿ ಹಿಂದೂಗಳು ಕಾಯುತ್ತಾ ಕುಳಿತುಕೊಳ್ಳುವುದಿಲ್ಲ...
ಕಾನ್ಪುರ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನ್ಯಾಯಾಲಯ ಆದೇಶ ನೀಡುವವರೆಗೆ 100 ಕೋಟಿ ಹಿಂದೂಗಳು ಕಾಯುತ್ತಾ ಕುಳಿತುಕೊಳ್ಳುವುದಿಲ್ಲ ಎಂದು ವಿಶ್ವಹಿಂದೂ ಪರಿಷತ್ ನೇತಾರ ಪ್ರವೀಣ್ ತೊಗಾಡಿಯಾ ಹೇಳಿರುವುದಾಗಿ ವರದಿಯಾಗಿದೆ.
ಅಮರ್ ಉಜಾಲಾ ಪತ್ರಿಕೆಯಲ್ಲಿ ಗುರುವಾರ ಪ್ರಕಟವಾಗಿರುವ ವರದಿ ಪ್ರಕಾರ, ರಾಮ ಮಂದಿರ ನಿರ್ಮಾಣ ವಿಷಯದ ಬಗ್ಗೆ ಮಾತನಾಡಿದ ವಿಹಿಂಪ ಪ್ರಧಾನ ಕಾರ್ಯದರ್ಶಿ, 100 ಕೋಟಿಯಷ್ಟಿರುವ ಹಿಂದೂಗಳು ಮಂದಿರ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ ಆದೇಶ ಬರುವ ವರೆಗೆ ಕಾದು ಕುಳಿತುಕೊಳ್ಳುವುದಿಲ್ಲ ಎಂದಿದ್ದಾರೆ. 
ಸಂಸತ್‌ನಲ್ಲಿ ಕಾನೂನು ಪಾಸ್ ಮಾಡುವ ಮೂಲಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವಂತಾಗಬೇಕು. ರಾಮ ಮಂದಿರ 100 ಕೋಟಿ ಹಿಂದೂಗಳ ನಂಬಿಕೆಗೆ ಸಂಬಂಧಿಸಿದ್ದು ಎಂದು ತೊಗಾಡಿಯಾ ಹೇಳಿದ್ದಾರೆ.
ಅದೇ ವೇಳೆ ನರೇಂದ್ರ ಮೋದಿ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಏನು ಹೇಳುತ್ತೀರಿ? ಎಂದು ಕೇಳಿದಾಗ, ಎನ್‌ಡಿಎ ಸರ್ಕಾರದ ಕಾರ್ಯವೈಖರಿ ಬಗ್ಗೆ ವಿಹಿಂಪ ಏನೂ ಹೇಳುವುದಿಲ್ಲ ಎಂದು ಉತ್ತರಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com