ಮಸೂದ್ ಬಂಧನದ ಮಾಹಿತಿಯಿಲ್ಲ: ಪಾಕಿಸ್ತಾನ ವಿದೇಶಾಂಗ ಕಚೇರಿ

ಪಠಾಣ್​ಕೋಟ್ ವಾಯುನೆಲೆ ದಾಳಿಯ 'ಮಾಸ್ಟರ್ ಮೈಂಡ್' ಜೈಷ್- ಎ- ಮೊಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ...
ಜೈಷ್- ಎ- ಮೊಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ (ಸಂಗ್ರಹ ಚಿತ್ರ)
ಜೈಷ್- ಎ- ಮೊಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ (ಸಂಗ್ರಹ ಚಿತ್ರ)
Updated on: 

ಇಸ್ಲಾಮಾಬಾದ್: ಪಠಾಣ್​ಕೋಟ್ ವಾಯುನೆಲೆ ದಾಳಿಯ 'ಮಾಸ್ಟರ್ ಮೈಂಡ್' ಜೈಷ್- ಎ- ಮೊಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.

ಮಸೂದ್ ಅಜರ್ ಬಂಧನ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಕ್ವಾಜಿ ಖಲೀಲುಲ್ಲ ಅವರು, ಶುಕ್ರವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ಮುಂದೂಡಲಾಗಿದ್ದು, ಸಾಧ್ಯವಾದಷ್ಟು ಬೇಗ ಮಾತುಕತೆ ಕುರಿತ ದಿನಾಂಕವನ್ನು ಮತ್ತೆ ಗೊತ್ತು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಸೂದ್ ಅಜರ್ ಬಂಧನ ಕುರಿತಂತೆ ಮಾತನಾಡಿರುವ ಅವರು, ಮಸೂದ್ ಬಂಧನ ಕುರಿತಂತೆ ಯಾವುದೇ ಮಾಹಿತಿಗಳಿಲ್ಲ ಎಂದು ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿದ ಮಾಡಿದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉದ್ದೇಶಿತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ಸೇರಿ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಳಿಸಲಾಗುವುದು ಎಂದು ಈ ಹಿಂದೆ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು. ಅಲ್ಲದೆ, ದಾಳಿ ವೇಳೆ ಉಗ್ರರು ಬಳಸಿದ್ದ ಫೋನುಗಳು ಹಾಗೂ ಅದರ ನಂಬರ್ ಹಾಗೂ ಇನ್ನಿತರೆ ಪ್ರಮುಖ ದಾಖಲೆಗಳನ್ನು ಪಾಕಿಸ್ತಾನಕ್ಕೆ ನೀಡಿತ್ತು. ಆದರೆ, ಎಲ್ಲಾ ದಾಖಲೆಗಳನ್ನು ಪಾಕಿಸ್ತಾನದ ಅಧಿಕಾರಿಗಳು ತಿರಸ್ಕರಿಸಿದ್ದರು. ಫೋನ್ ನಂಬರ್ ಗಳು ಪಾಕಿಸ್ತಾನದಲ್ಲಿ ನೋಂದಣಿಯಾಗಿರದ ಸಂಖ್ಯೆಗಳು ಎಂದು ಹೇಳಿತ್ತು.

ನಂತರ ಭಾರತ ನೀಡಿರುವ ಸಾಕ್ಷ್ಯ ಆಧರಿಸಿ ಪಾಕಿಸ್ತಾನದ ಭದ್ರತಾ ಏಜೆನ್ಸಿ ಅಧಿಕಾರಿಗಳು ಇಸ್ಲಾಮಾಬಾದ್ ಸೇರಿ ವಿವಿಧ ನಗರಗಳಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿ ಮಸೂದ್ ಸೇರಿ ಜೆಇಎಂನ ಉಗ್ರರನ್ನು ಬಂಧಿಸಿದ್ದಾರೆಂದು ಹೇಳಲಾಗುತ್ತಿತ್ತು. ಇದೀಗ ಮಸೂದ್ ಬಂಧನ ಕುರಿತಂತೆ ಮಾಹಿತಿ ನೀಡಿರುವ ಪಾಕಿಸ್ತಾನವು ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com