

ಮುಂಬಯಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಅಣ್ಣಾ ಹಜಾರೆಗೆ ಬೆದರಿಕೆ ಪತ್ರ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.
ಹಿರಿಯ ಗಾಂಧಿ ವಾದಿ ಅಣ್ಣಾ ಹಜಾರೆ ಅವರ ಜೀವನ ಜನವರಿ 26 ರಂದು ಕೊನೆಗೊಳ್ಳಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಬಾರಿ ಅವರನ್ನು ಯಾವ ಪೊಲೀಸರಿಂದಲೂ ರಕ್ಷಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಬರೆಯಲಾಗಿದೆ.
ಇನ್ನು ಈ ಸಂಬಂಧ ಅಹಮದಾನಗರ ಜಿಲ್ಲೆಯ ಪರ್ನರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದುವರೆಗೂ ಅಣ್ಣಾ ಹಜಾರೆಗೆ ಹಲವು ಬೆದರಿಕೆ ಕರೆ ಬಂದಿದ್ದು, ಮಹಾರಾಷ್ಟ್ರ ಸರ್ಕಾರ ಅಣ್ಣಾ ಹಜಾರೆ ಅವರಿಗೆ ಝೆಡ್ ಪ್ಲಸ್ ಭದ್ರತೆ ಒದಗಿಸಲು ಮುಂದಾಗಿತ್ತು, ಆದರೆ ಅಣ್ಣಾ ಹಜಾರೆ ಅದನ್ನು ನಿರಾಕರಿಸಿದ್ದಾರೆ.