ಕಾಶ್ಮೀರದಲ್ಲಿ ಸರ್ಕಾರ ರಚನೆಯ ಸೂಚನೆ, ಪಕ್ಷದ ಸಭೆ ಕರೆದ ಪಿಡಿಪಿ ಮುಖ್ಯಸ್ಥೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯ ಸುಳಿವು ನೀಡಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನಾಳೆ...
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯ ಸುಳಿವು ನೀಡಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನಾಳೆ ಪಕ್ಷದ ಸಭೆ ಕರೆದಿದ್ದಾರೆ.
ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮತ್ತೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುವ ಸಂಬಂಧ ಚರ್ಚಿಸಲು ತಮ್ಮ ನಿವಾಸದಲ್ಲಿ ನಾಳೆ ಪಕ್ಷದ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ ಎಂದು ಪಿಡಿಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಪಕ್ಷದ ಸಂಸದರು, ಮಾಜಿ ಸಚಿವರು, ಹಾಗೂ ಹಿರಿಯ ಪದಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಪಿಡಿಪಿ ಅಧ್ಯಕ್ಷೆ ಹಾಗೂ ಅವರ ಪುತ್ರಿ ಮೆಹಬೂಬಾ ಮುಫ್ತಿ ಅವರು ಕರೆದಿರುವ ಮೊದಲ ಸಭೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com