ಕೊಲ್ಕೊತಾದಲ್ಲಿ ಒಂದೇ ಕುಟುಂಬದ ಮೂವರ ಕೊಲೆ

ದಕ್ಷಿಣ ಕೋಲ್ಕತ್ತಾದ ಅಪಾರ್ಟ್‌‌ಮೆಂಟ್‌ವೊಂದರಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿದ್ದ ಪತಿಯನ್ನು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ಅಪಾರ್ಟ್‌‌ಮೆಂಟ್‌ವೊಂದರಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿದ್ದ ಪತಿಯನ್ನು ಪತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಪಾಮ್ ಅಪಾರ್ಟ್‌‌ಮೆಂಟ್‌‌‌‌ನ ಮೂರನೇ ಅಂತಸ್ತಿನಲ್ಲಿ ವಾಸವಿದ್ದ ನೀಲ್ ಫೊನೆಸ್ಕಾ ಎಂಬುವವರ ಮನೆಯಲ್ಲಿ ಅವರ ಪತ್ನಿ 49 ವರ್ಷದ ಜೆಸ್ಸಿಕಾ ಫೊನೆಸ್ಕಾ, ಅವಳಿ ಗಂಡು ಮಕ್ಕಳಾದ ಟೆರೆನ್ ಹಾಗೂ ಜೊಶುಹಾ ಅವರ ಶವಗಳು ದೊರೆತಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಪತಿ ನೀಲ್ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು ಎಂದು ಹೇಳಲಾಗಿದೆ.

ಕೂಡಲೇ ನೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು, ಪತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲವಾದರೂ, ಕೌಟುಂಬಿಕ ಕಲಹವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನಿನ್ನೆ ರಾತ್ರಿ ಪಾರ್ಟಿಯೊಂದಕ್ಕೆ ಹೋಗಿದ್ದ ಫೊನೆಸ್ಕಾ ಕುಟುಂಬ, ಮರಳಿ ಮನೆಗೆ ಬಂದಾಗ  ಸಣ್ಣ ಪ್ರಮಾಣದ ಗದ್ದಲ ಕೇಳಿ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಇದೇ ಜಗಳ ನಡುರಾತ್ರಿ ತಾರಕಕ್ಕೆ ಹೋಗಿ ನೀಲ್ ತಮ್ಮ ಪತ್ನಿ ಹಾಗೂ ಮಕ್ಕಳನ್ನು ಕೊಲೆ ಮಾಡುವ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.

ಪತ್ನಿ ಹಾಗೂ ಮಕ್ಕಳನ್ನು ಕೊಂದು ನೀಲ್ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಸೂಕ್ತ ಸಮಯದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರಿಂದ ನೀಲ್ ಬದುಕುಳಿದಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com