ರಾಷ್ಟ್ರಪತಿ ಆಳ್ವಿಕೆ ಹೇರಲು ಒತ್ತಡವಿತ್ತು: ಭಾರದ್ವಾಜ್

ಬಿಹಾರದಲ್ಲಿ 2005ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ-ಜೆಡಿಯು ಮೈತ್ರಿಕೂಟ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸುಪ್ರೀಂಕೋರ್ಟಿಂದ ಅನುಮೋದನೆ ಪಡೆದುಕೊಳ್ಳಬೇಕು...
ಕೇಂದ್ರದ ಮಾಜಿ ಸಚಿವ ಎಚ್.ಆರ್.ಭಾರದ್ವಾಜ್ (ಸಂಗ್ರಹ ಚಿತ್ರ)
ಕೇಂದ್ರದ ಮಾಜಿ ಸಚಿವ ಎಚ್.ಆರ್.ಭಾರದ್ವಾಜ್ (ಸಂಗ್ರಹ ಚಿತ್ರ)

ನವದೆಹಲಿ: ಬಿಹಾರದಲ್ಲಿ 2005ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ-ಜೆಡಿಯು ಮೈತ್ರಿಕೂಟ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸುಪ್ರೀಂಕೋರ್ಟಿಂದ ಅನುಮೋದನೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ತಾವು ಕಾನೂನು ಸಚಿವ ಸ್ಥಾನ ಕಳೆದುಕೊಳ್ಳುವ ಭೇಟಿ ಎದುರಾಗಿತ್ತು ಎಂದು ಕೇಂದ್ರದ ಮಾಜಿ ಸಚಿವ ಎಚ್.ಆರ್.ಭಾರದ್ವಾಜ್ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ `ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‍ನ ಅಂದಿನ ಮುಖ್ಯ ನ್ಯಾಯಮೂರ್ತಿ ವೈ.ಕೆ.ಸಭರ್‍ವಾಲ್ ಜತೆ ಭೇಟಿಯಾಗಿದ್ದೆ. ಈ ಮೂಲಕ  ಸರ್ಕಾರದ ತೀರ್ಮಾನ ಎತ್ತಿಹಿಡಿ ಯುವ ಬಗ್ಗೆ ಚರ್ಚಿಸಲು ಮುಂದಾಗಿದ್ದೆ. ಆದರೆ ಅದನ್ನು ಚರ್ಚಿಸಲು ಸಾಧ್ಯವಾಗದೆ ಹಿಂತಿರುಗಿದ್ದೆ ಎಂದು ಭಾರದ್ವಾಜ್ ತಿಳಿಸಿದ್ದಾರೆ ಎಂದು ಪತ್ರಿಕೆ ವರದಿ  ಮಾಡಿದೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಭಾರದ್ವಾಜ್ ಹೇಳಿಕೆಯನ್ನು ತಿರಸ್ಕರಿಸಿದೆ. ಯುಪಿಎ ಸರ್ಕಾರದ ಯಾವುದೇ ಸಚಿವರು ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮುಂದಾಗಿರಲಿಲ್ಲ ಎಂದು ಪಕ್ಷದ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಭಾರದ್ವಾಜ್ ಹೇಳಿಕೆಯಿಂದ ಕಾಂಗ್ರೆಸ್ ಪ್ರಜಾಸತ್ತಾತ್ಮಕ  ಮೌಲ್ಯಗಳನ್ನು ಗೌರವಿಸುವುದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com