ಕರುಣಾನಿಧಿ ಮಾನನಷ್ಟ ಮೊಕದ್ದಮೆ ಕೇಸು: ಮಾರ್ಚ್ 10ಕ್ಕೆ ಮುಂದೂಡಿಕೆ

ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ

ಚೆನ್ನೈ: ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ಮಾರ್ಚ್ 10ಕ್ಕೆ ಮುಂದೂಡಿದೆ.

ಕರುಣಾನಿಧಿ ಅವರ ವಿರುದ್ಧ ಮುಖ್ಯಮಂತ್ರಿ ಜೆ. ಜಯಲಲಿತಾ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸು ದಾಖಲಿಸಿದ್ದು, ಈ ಸಂಬಂಧ ಮದ್ರಾಸ್ ಹೈಕೋರ್ಟ್ ಗೆ ಇಂದು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.

ಸೆಷನ್ಸ್ ಪ್ರಧಾನ ನ್ಯಾಯಾಧೀಶ ಎಂ. ಅತಿನಾತನ್ ಕಳೆದ ತಿಂಗಳು ರಾಜ್ಯ ಸರ್ಕಾರ ದಾಖಲಿಸಿದ್ದ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಕರುಣಾನಿಧಿ ಮತ್ತು ಡಿಎಂಕೆ ಮುಖವಾಣಿ ಮುರಸೋಲಿಯ ಸಂಪಾದಕ ಸೆಲ್ವಂ ಅವರನ್ನು ಜನವರಿ 18ರೊಳಗೆ ಹಾಜರಾಗುವಂತೆ ಸೂಚಿಸಿದ್ದರು.

ಸರ್ಕಾರದ ಪರ ವಾದ ಮಂಡಿಸಿದ ನಗರ ಪಬ್ಲಿಕ್ ಪ್ರಾಸಿಕ್ಯೂಟರ್, ಕರುಣಾನಿಧಿಯವರು ಪಕ್ಷದ ಮುಖವಾಣಿ ಮುರಸೋಳಿಯಲ್ಲಿ ಜಯಲಲಿತಾ ಸರ್ಕಾರದ ನಾಲ್ಕು ವರ್ಷಗಳ ಸಾಧನೆ ಬಗ್ಗೆ ಲೇಖನವೊಂದನ್ನು ಪ್ರಕಟಿಸಿದ್ದು,ಅದು ಆಡಳಿತ ಪಕ್ಷದ ಮಾನ ಹಾನಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com