ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿಗೆ ಕಾನೂನು ರಕ್ಷಣೆ

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿ ನೌಶಾದ್ ಅಹಮದ್ ಖಾನ್ ಅವರಿಗೆ ಸುಪ್ರೀಂಕೋರ್ಟ್
ಶಬರಿಮಲೆ
ಶಬರಿಮಲೆ
ನವದೆಹಲಿ: ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿ ನೌಶಾದ್ ಅಹಮದ್ ಖಾನ್ ಅವರಿಗೆ ಸುಪ್ರೀಂಕೋರ್ಟ್ ಕಾನೂನಿನ ಅಭಯ ನೀಡಿದೆ.
ಮಹಿಳೆಯರಿಗೆ ಶಬರಿಮಲೆಯಲ್ಲಿ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ ನಂತರ ನೌಶಾದ್ ಅವರಿಗೆ ಬೆದರಿಕೆ ಕರೆಗಳು ಬರತೊಡಗಿದ್ದವು. ಈ ಹಿನ್ನೆಲೆಯಲ್ಲಿ ನೌಶಾದ್ ಅವರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಮತ್ತು ಆ ಬಗ್ಗೆ ದೆಹಲಿ ಪೊಲೀಸ್ ಕಮಿಷನರ್ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ. 
ಆದಾಗ್ಯೂ, ಸಾಮಾಜಿಕ ತಾಣದಲ್ಲಿ ನೌಶಾದ್ ಬಗ್ಗೆ ನಡೆಯುತ್ತಿರುವ ಚರ್ಚೆಗಳೋ, ಇತರ ಯಾವುದೇ ಕ್ರಿಯೆಗಳ ಬಗ್ಗೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾಮಾಜಿಕ ತಾಣ ಮತ್ತು ಫೋನ್ ಮೂಲಕ ನೌಶಾದ್ ಅವರಿಗೆ ಬೆದರಿಕೆಗಳು ಬಂದಿದ್ದವು. ಈ ಬೆದರಿಕೆಗಳನ್ನು ನೀಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ನೌಶಾದ್ ಅವರಿಗೆ ಭರವಸೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com