ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೈದ್ರಾಬಾದ್‌ಗೆ ಭೇಟಿ ನೀಡುವ ಮೂಲಕ ಗಾಯಕ್ಕೆ ಉಪ್ಪು ಹಚ್ಚುತ್ತಿದ್ದಾರೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಪ್ರತಿಕ್ರಿಯಿಸಿದ್ದಾರೆ.
ಹೈದ್ರಾಬಾದ್ ವಿವಿಯಲ್ಲಿ ಸೋಮವಾರ ಸಂಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಮತ್ತು ವಿಶ್ವ ವಿದ್ಯಾನಿಲಯದ ಉಪ ಕುಲಪತಿಯವರೇ ಕಾರಣ ಎಂದು ಆರೋಪಿಸಿ ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಜತೆಗೆ ಮಂಗಳವಾರ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ರಾಹುಲ್ ಭೇಟಿ ಬಗ್ಗೆ ಗೆಹ್ಲೋಟ್ ಹೇಳಿದ್ದೇನು?
ರಾಹುಲ್ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಸಚಿವ ತಾವರ್‌ಚಂದ್ ಗೆಹ್ಲೋಟ್ ಅವರು, ಇಂಥಾ ಪ್ರಕರಣಗಳಲ್ಲಿ ರಾಜಕೀಯ ಸಲ್ಲ ಎಂದಿದ್ದಾರೆ. ಈ ಪ್ರಕರಣದ ಬಗ್ಗೆ ಸಚಿವಾಲಯವು ಮಾಹಿತಿ ಸಂಗ್ರಹಿಸುತ್ತಿದ್ದು, ನ್ಯಾಯ ಒದಗಿಸಲಾಗುವುದು ಎಂದು ಗೆಹ್ಲೋಟ್ ಭರವಸೆ ನೀಡಿದ್ದಾರೆ.
ವಿಶ್ವ ವಿದ್ಯಾನಿಲಯಕ್ಕೆ ಯಾರ್ಯಾರು ಭೇಟಿ ನೀಡಲಿದ್ದಾರೆ?
-ತೃಣಮೂಲ ಕಾಂಗ್ರೆಸ್ ನಾಯಕ ಡೆರಿಕ್ ಓ ಬ್ರೈನ್ ಮತ್ತು ಪ್ರತಿಮಾ ಮಂಡಲ್
-ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಬಹುಜನ್ ಸಮಾಜ್ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೈದ್ರಾಬಾದ್‌ಗೆ ತನಿಖಾ ತಂಡವನ್ನು ಕಳಿಸಿದ್ದಾರೆ.