ದೇಶ

ಪಂಜಾಬ್ ಚುನಾವಣೆಗೂ ಮುನ್ನ ಉಚ್ಚಾಟಿತ ಆಪ್ ನಾಯಕ ಯಾದವ್, ಪ್ರಶಾಂತ್ ಭೂಷಣ್ ರಿಂದ ಹೊಸ ಪಕ್ಷ ಘೋಷಣೆ?

ಆಮ್ ಆದ್ಮಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಹೊಸ ಪಕ್ಷವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದಾರೆ.

ಪಂಜಾಬ್ ಚುನಾವಣೆಗೂ ಮುನ್ನ ಉಚ್ಚಾಟಿತ ಆಪ್ ನಾಯಕ ಯಾದವ್, ಪ್ರಶಾಂತ್ ಭೂಷಣ್ ರಿಂದ ಹೊಸ ಪಕ್ಷ ಘೋಷಣೆ?
ಪ್ರಶಾಂತ್ ಭೂಷಣ್ - ಯೋಗೇಂದ್ರ ಯಾದವ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಹೊಸ ಪಕ್ಷವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದು  2017 ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.    
ಆಪ್ ನಿಂದ ಉಚ್ಚಾಟನೆಯಾದ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಕಟ್ಟಿರುವ ಯೋಗೇಂದ್ರ ಸಿಂಗ್ ಯಾದವ್, ಪ್ರಶಾಂತ್ ಭುಷಣ್ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಪರ್ಯಾಯವಾಗಿ ಮತ್ತೊಂದು ರಾಜಕೀಯ ಪಕ್ಷ ಸ್ಥಾಪಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಇರಾದೆ ಹೊಂದಿದ್ದಾರೆ. 
" ಶೀಘ್ರವೆ ರಾಜಕೀಯ ಪಕ್ಷವನ್ನು ಘೋಷಿಸುವ ಯೋಜನೆ ಇದೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ, ಹಾಗೆಯೇ ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದರ ಬಗ್ಗೆಯೂ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸ್ವರಾಜ್ ಅಭಿಯಾನದ ಮುಖಂಡರೋಬ್ಬರು ಹೇಳಿದ್ದಾರೆ.
ಪಂಜಾಬ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಸಂಗೀತಗಾರ  ಭಾಯ್ ಬಲ್ದೀಪ್ ಅವರಿಗೆ ಬೆಂಬಲ ಘೋಷಿಸುತ್ತೇವೆ ಎಂದು ಸ್ವರಾಜ್ ಅಭಿಯಾನ್ ನ ಮುಖಂಡರು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸಂಘಟಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಯೋಜನೆ ರೂಪಿಸುತ್ತಿರುವ ಬೆನ್ನಲ್ಲೇ ಆಪ್ ಗೆ ಪರ್ಯಾಯವಾಗಿ ಮತ್ತೊಂದು ಪಕ್ಷ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳು ದಟ್ಟವಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.