ಕೇಜ್ರಿವಾಲ್ ಮೇಲೆ ಮಸಿ ದಾಳಿ ಮಾಡಿದ್ದ ಮಹಿಳೆಗೆ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿ ಜೈಲು ಪಾಲಾಗಿದ್ದ ಮಹಿಳೆಗೆ ಶುಕ್ರವಾರ...
ಭಾವನ ಅರೋರಾ
ಭಾವನ ಅರೋರಾ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿ ಜೈಲು ಪಾಲಾಗಿದ್ದ ಮಹಿಳೆಗೆ ಶುಕ್ರವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಸಿಎಂ ಮೇಲೆ ಮಸಿ ಎರಚಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ 26 ವರ್ಷದ ಭಾವನ ಅರೋರಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂಜೀವ್ ಕುಮಾರ್ ಅಗರವಾಲ್ ಅವರು, 10 ಸಾವಿರ ರುಪಾಯಿ ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.
ವಿಚಾರಣೆ ವೇಳೆ ಅರೋರಾ ಪರ ವಕೀಲ ಪ್ರದೀಪ್ ರಾಣಾ ಅವರು, ತನ್ನ ಕಕ್ಷಿದಾರೆ ರಾಜ್ಯದ ಮುಖ್ಯಮಂತ್ರಿ ಮೇಲೆ ಮಸಿ ಎರಚಿದ್ದು ತಪ್ಪು ಅಂತ ಒಪ್ಪಿಕೊಂಡಿದ್ದಾರೆ. ಪ್ರಕರಣದಿಂದ ನಾವು ಈಗಾಗಲೇ ಪಾಠ ಕಲಿತಿದ್ದೇವೆ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು.
ಆದರೆ ಅರೋರಾ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ತನಿಖಾ ಸಂಸ್ಥೆ, ರಾಜ್ಯದ ಮುಖ್ಯಸ್ಥರ ಮುಖಕ್ಕೆ ಮಸಿ ಬಳಿಯುವ ಮೂಲಕ ಆರೋಪಿ ತಪ್ಪು ಮಾಡಿದ್ದಾರೆ. ಅದರ ಹಿಂದೆ ಯಾರ ಕೈವಾಡ ಇದೆ ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದು, ಆರೋಪಿಗೆ ಜಾಮೀನು ನೀಡಬೇಡಿ ಎಂದು ಮನವಿ ಮಾಡಿದರು
ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಅಗರವಾಲ್ ಅವರು, ಆರೋಪಿ ಜನವರಿ 18ರಿಂದ ಜೈಲಿನಲ್ಲಿದ್ದಾಳೆ. ಇನ್ನು ಅವರನ್ನು ಜೈಲಿನಲ್ಲಿಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಅಭಿಪ್ರಾಯಪಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com