
ನವದೆಹಲಿ: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುನಂದಾ ಪುಷ್ಕರ್ ಸಾವಿನ ರಹಸ್ಯ ಬಹಿರಂಗವಾಗಿದ್ದು, ವಿಷ ಪ್ರಾಶನದಿಂದ ಪುಷ್ಕರ್ ಮೃತಪಟ್ಟಿದ್ದಾರೆ ಎಂದು ಏಮ್ಸ್ ವೈದ್ಯರು ವರದಿ ನೀಡಿದ್ದಾರೆ.
ಆಲ್ರ್ಪಾಕ್ಸ್ ಓವರ್ ಡೋಸ್ ನಿಂದಾಗಿ ಸುನಂದಾ ಪುಷ್ಕರ್ ಸಾವನ್ನಪ್ಪಿದ್ದಾರೆ ಎಂದು ಏಮ್ಯ್ ವೈದ್ಯರು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದಾರೆ. ಎಫ್ ಬಿಐ ವರದಿ ಆಧಾರಿಸಿ ಈ ವರದಿಯನ್ನು ವೈದ್ಯರು ತಯಾರಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.
2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.
Advertisement