

ನವದೆಹಲಿ: ದಕ್ಷಿಣ ಏಷ್ಯಾದ ರಾಷ್ಟ್ರಗಳಿಗೆ ಭಾರತ ಭಾನುವಾರದಿಂದ ಎಲ್ ನಿನೋ ಎಚ್ಚರಿಕೆ ಸಂದೇಶ ರವಾನಿಸಲು ಆರಂಭಿಸಿದೆ.
ದಕ್ಷಿಣ ಏಷ್ಯಾದ ಶ್ರೀಲಂಕಾ, ಪಾಕಿಸ್ತಾನ, ಮಾಲ್ಡೀವ್ಸ್, ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್ ಮತ್ತು ನೇಪಾಳ ರಾಷ್ಟ್ರಗಳಿಗೆ ಭಾರತ ಹವಾಮಾನ ಇಲಾಖೆ ಇಂದಿನಿಂದ ಎಲ್ ನಿನೋ ಸಂದೇಶ ರವಾನಿಸಲು ಆರಂಭಿಸಿದೆ. ಈ ಹಿಂದೆ ವಿಶ್ವ ಹವಾಮಾನ ಸಂಸ್ಥೆ ಭಾರತೀಯ ಹವಾಮಾನ ಇಲಾಖೆಯನ್ನು ಪ್ರಾದೇಶಿಕ ಹವಾಮಾನ ಕೇಂದ್ರವಾಗಿ ಅನುಮೋದನೆ ನೀಡಿತ್ತು. ಈ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದಿನಿಂದ ದಕ್ಷಿಣ ಏಷ್ಯಾದ ರಾಷ್ಟ್ರಗಳಿಗೆ ಹವಾಮಾನ ಸಂಬಂಧಿ ಸಂದೇಶ ರವಾನೆ ಮಾಡಲು ಆರಂಭಿಸಿದೆ. ಭವಿಷ್ಯದಲ್ಲಿ ಈ ಸಂದೇಶ ವ್ಯವಸ್ಥೆಯನ್ನು ಮಯನ್ಮಾರ್ ದೇಶಕ್ಕೂ ವಿಸ್ತರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಹವಾಮಾನ ಇಲಾಖೆಯ ಹಿರಿಯ ತಜ್ಞ ಎಸ್ ಪೈ ಅವರು, ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ಎಲ್ ನಿನೋ ಸಂದೇಶ ರವಾನಿಸಲು ನಾವು ಇಂದಿನಿಂದ ಆರಂಭಿಸಿದ್ದೇವೆ. ಪ್ರತೀ ತಿಂಗಳು ಈ ಮಾಹಿತಿಯನ್ನು ನೀಡಲಾಗುತ್ತಿರುತ್ತದೆ. ಭಾರತೀಯ ಹವಾಮಾನ ಇಲಾಖೆಗೆ ವಿಶ್ವ ಹಮಾಮಾನ ಇಲಾಖೆ ಪ್ರಾದೇಶಿಕ ಹವಾಮಾನ ಕೇಂದ್ರವಾಗಿ ಅನುಮೋದನೆ ನೀಡಿದೆ. ಅಲ್ಲದೆ ಹವಾಮಾನ ಮತ್ತು ಮಾನ್ಸೂನ್ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳಿಗೆ ಎಲ್ ನಿನೋ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿದರು.
Advertisement