ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಗೆಅಭೂತ ಪೂರ್ವ ಭದ್ರತೆ

ಣರಾಜ್ಯೋತ್ಸವದ ವೇಳೆ ಭಯೋತ್ಪಾದಕ ಕೃತ್ಯಗಳು ನಡೆಯುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಅಭೂತ ಪೂರ್ವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಗಣರಾಜ್ಯೋತ್ಸವದ ವೇಳೆ ಭಯೋತ್ಪಾದಕ ಕೃತ್ಯಗಳು ನಡೆಯುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಅಭೂತ ಪೂರ್ವ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ.

ಸುಮಾರು 40ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ, ರಾಜಧಾನಿಯ ಇಂಚಿಂಚು ಸ್ಥಳವನ್ನೂ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನವಾದ ಇಂದು ದೆಹಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಠಾಣ್‌ಕೋಟ್ ವಾಯುನೆಲೆ ಮೇಲಿನ ಉಗ್ರದಾಳಿ, ದೇಶದ ವಿವಿಧೆಡೆ ಏಕಕಾಲಕ್ಕೆ ಹಲವು ಉಗ್ರರ ಬಂಧನ, ಬಂಧಿತ ಉಗ್ರರು ಬಾಯಿಬಿಟ್ಟ ಸ್ಫೋಟಕ ಮಾಹಿತಿಗಳು ಈ ಎಲ್ಲಾ ಬೆಳವಣಿಗೆಗಳನ್ನು ಗಂಭಿರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು, ನಾಳಿನ ಕಾರ್ಯಕ್ರಮದ ಸಂದರ್ಭ ಯಾವುದೇ ಅಹಿತಕರ ಘಟನೆಗಳಿಗೂ ಅವಕಾಶವಾಗದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಪೊಲೀಸ್ ಪಡೆ, ಸೇನಾ ಪಡೆ, ಅರೆಸೇನಾಪಡೆ, ಉಗ್ರ ನಿಗ್ರಹದಳದ ತಂಡಗಳು, ವಿಶೇಷ ಭದ್ರತಾ ಪಡೆಗಳು, ಶ್ವಾನದಳ, ಬಾಂಬ್ ನಿಷ್ಕ್ರಿಯದಳ, ಗೃಹರಕ್ಷಕದಳ ಹೀಗೆ 40ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸಿಸಿ ಟಿವಿ ಕ್ಯಾಮರಾಗಳು ಭದ್ರತೆಗೆ ಅಳವಡಿಸಲಾಗಿದೆ.

ವಿಮಾನ ನಿಲ್ದಾಣಗಳು, ಬಸ್‌ನಿಲ್ದಾಣಗಳು, ರೈಲು ಹಾಗೂ ಮೆಟ್ರೊ ರೈಲು ನಿಲ್ದಾಣಗಳು, ದೊಡ್ಡ ಹೊಟೇಲ್‌ಗಳು, ಹೆಚ್ಚು ಜನ ಸೇರುವ ಸ್ಥಳಗಳು, ಕ್ಲಬ್‌ಗಳು ಸೇರಿದಂತೆ ಜನ ಜಮಾಯಿಸುವ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಜ್ಜೆ ಹೆಜ್ಜೆಗೆ ಪೊಲೀಸರು ನೆರೆದಿದ್ದು ವಾಹನಗಳು ಪ್ರಯಾಣಿಕರು, ಸಾರ್ವಜನಿಕರನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಇಂಡಿಯಾ ಗೇಟ್ ಪ್ರದೇಶದಲ್ಲಿ 400ಕಟ್ಟಡಗಳನ್ನು ಗುರುತಿಸಿದ್ದು, ಅಲ್ಲೆಲ್ಲಾ ಭಾರೀ ಬಿಗಿಭದ್ರತೆ ಒದಗಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರ ಅಳವಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com