
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಶೀಘ್ರವೇ ಪುನಃ ಅಧಿಕಾರ ವಹಿಸಿಕೊಳ್ಳಲಿದೆ ಎಂದು ರಾಜ್ಯಪಾಲ ಎನ್.ಎನ್ ವೋಹ್ರಾ ಹೇಳಿದ್ದಾರೆ.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ರಾಜ್ಯಪಾಲ ವೋಹ್ರಾ, ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಅವರ ನಿಧನದಿಂದಾಗಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ. ಶೀಘ್ರವೇ ಚುನಾಯಿತ ಸರ್ಕಾರ ಮತ್ತೆ ಅಧಿಕಾರ ವಹಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿರೀಕ್ಷೆಯಂತೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ, ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಮೆಹಬೂಬಾ ಮುಫ್ತಿ, ತಂದೆಯ ನಿಧನದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement