ಕಾಶ್ಮೀರದಲ್ಲಿ ಉಗ್ರನೊಬ್ಬನ ಎನ್ ಕೌಂಟರ್

ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ಉಗ್ರನೊಬ್ಬನನ್ನು ಎನ್ ಕೌಂಟರ್ ಮಾಡಿದ್ದಾರೆ ಎಂದು ಮೂಲಗಳು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ಉಗ್ರನೊಬ್ಬನನ್ನು ಎನ್ ಕೌಂಟರ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕಾಶ್ಮೀರದಲ್ಲಿರುವ ಅನಂತ್ ನಾಗ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 4 ಗಂಟೆಗೆ ಉಗ್ರನನ್ನು ಎನ್ ಕೌಂಟರ್ ಮಾಡಲಾಗಿದೆ. ಆದರೆ, ಈ ಉಗ್ರನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ನೀಡಿದ್ದ ಮಾಹಿತಿಯ ಆಧಾರದ ಮೇಲೆ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹೆಚ್ಚಿನ ತಪಾಸಣೆ ಕೈಗೊಂಡಿದ್ದರು. ಈ ವೇಳೆ ಸಿಕ್ಕಿಬಿದ್ದ ಉಗ್ರನೊಬ್ಬನನ್ನು ಎನ್ ಕೌಂಟರ್ ಮಾಡಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com