ನವದೆಹಲಿ: ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ದೆಹಲಿ ವಿವಿಗಳ ಸಾವಿರಾರು ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆ ಆರಂಭಿಸಿದ್ದು, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದತ್ತ ಮೆರವಣಿಗೆ ಹೊರಟಿದ್ದ 60 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.