ಸರ್ಕಾರ, ಜೇಟ್ಲಿ, ಸಿಬಿಐ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಕೀರ್ತಿ ಆಜಾದ್

ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆಯ(ಡಿಡಿಸಿಎ) ಭ್ರಷ್ಟಾಚಾರ ಪ್ರಕರಣ ಸಂಬಂಧ ಬಿಜೆಪಿಯಿಂದ ಅಮಾನತುಗೊಂಡಿರುವ...
ಕೀರ್ತಿ ಅಜಾದ್
ಕೀರ್ತಿ ಅಜಾದ್
ನವದೆಹಲಿ: ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆಯ(ಡಿಡಿಸಿಎ) ಭ್ರಷ್ಟಾಚಾರ ಪ್ರಕರಣ ಸಂಬಂಧ ಬಿಜೆಪಿಯಿಂದ ಅಮಾನತುಗೊಂಡಿರುವ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಅವರು ಕೇಂದ್ರ ಸರ್ಕಾರ, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಸಿಬಿಐ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಗುರುವಾರ ಹೇಳಿದ್ದಾರೆ.
ಈ ಸಂಬಂಧ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಕೀರ್ತಿ ಆಜಾದ್,  ಡಿಡಿಸಿಐ ಹಗರಣದ ತನಿಖೆಗೆ ಆಡಳಿತಾತ್ಮಕ ಮತ್ತು ಕಾಲ ಮಿತಿ ಒಳಗೊಂಡ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.
ಡಿಡಿಸಿಎ ಮತ್ತು ಹಾಕಿ ಇಂಡಿಯಾ ಸಂಸ್ಥೆಗಳಲ್ಲಿ ನಡೆದಿರುವ ಹಗರಣದಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಪಾಲ್ಗೊಂಡಿದ್ದಾರೆ ಎಂದು ಕೀರ್ತಿ ಆಜಾದ್ ಕಳೆದ ಸೆಪ್ಟೆಂಬರ್ 13ರಂದು ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದರು. ಅದರೆ ಜೇಟ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕೀರ್ತಿ ಆರೋಪಿಸಿದರು. ಈ ಪತ್ರದ ಪ್ರತಿಗಳನ್ನೂ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com