ರಾಷ್ಟ್ರಪತಿ ಆಡಳಿತಕ್ಕೆ ವಿರೋಧ: ಸುಪ್ರೀಂಗೆ ಅರ್ಜಿ ಸಲ್ಲಿಸಿದ ಮಾಜಿ ಸಿಎಂ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಾಮ್ ತುಕಿ ಅವರು ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು...
ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಾಮ್ ತುಕಿ (ಸಂಗ್ರಹ ಚಿತ್ರ)
ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಾಮ್ ತುಕಿ (ಸಂಗ್ರಹ ಚಿತ್ರ)

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಾಮ್ ತುಕಿ ಅವರು ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ದಾಖಲಿಸಿದ್ದಾರೆ.

ನಬಾಮ್ ತುಕಿ ದಾಖಲಿಸಿರುವ ಅರ್ಜಿಯನ್ನು ಸುಪ್ರೀಂ ನ್ಯಾಯಾಲಯವು ಸೋಮವಾರ ಪರಿಶೀಲನೆ ನಡೆಸಲಿದ್ದು, ಅರ್ಜಿಯನ್ನು 5 ನ್ಯಾಯಾಧೀಶರನ್ನು ಹೊಂದಿರುವ ಪೀಠ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.

ಅರುಣಾಚಲ ಪ್ರದೇಶದಲ್ಲಿ ‘ಸಾಂವಿಧಾನಿಕ ಬಿಕ್ಕಟ್ಟು’ ಎದುರಾಗಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿತ್ತು.  ರಾಜ್ಯಪಾಲ ರಾಜ್‌ಖೋವಾ ನೀಡಿದ ವರದಿಯನ್ನು ಆಧರಿಸಿ ಕೇಂದ್ರ ಈ ನಿಲುವನ್ನು ತೆಗೆದುಕೊಂಡಿತ್ತು. ಇದಕ್ಕೆ ಕಾಂಗ್ರೆಸ್ ನಾಯಕರು ಹಲವು ವಿರೋಧಗಳನ್ನು ವ್ಯಕ್ತಪಡಿಸಿದ್ದರೂ ಆದರೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ಶಿಫಾರಸ್ಸಿಗೆ ಮಂಗಳವಾರ ಸಹಿ ಹಾಕಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com