
ನವದೆಹಲಿ: ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕಾರಣಕ್ಕಾಗಿಯೇ ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಕೋವಾ ಅವರು ಹೇಳಿರುವುದಾಗಿ ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.
ಅರುಣಾಚಲದಲ್ಲಿ ಸಂವಿಧಾನ ಕಾರ್ಯಚಟುವಟಿಕೆಯೇ ಕುಸಿಯುತ್ತಿದೆ ಎಂದು ಉಲ್ಲೇಖಿಸಿರುವ ರಾಜ್ಯಪಾಲ ಜೆಪಿ ರಾಜಕೋವಾ, ಶಿಫಾರಸು ಪತ್ರದ ಜೊತೆ ಗೋಹತ್ಯೆ ಫೋಟೋಗ್ರಾಫ್ಸ್ ಅನ್ನು ಲಗತ್ತಿಸುವ ಮೂಲಕ ರಾಜ್ಯದಲ್ಲಿ ತುರ್ತಾಗಿ ರಾಷ್ಟ್ರಪತಿ ಆಡಳಿತ ಹೇರುವುದನ್ನು ಸಮರ್ಥಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಕಾರಣ ಬಯಲಾಗಿದೆ.
Advertisement