ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಆಪ್ ಶಾಸಕ ಮಹೇಂದ್ರ ಯಾದವ್ ಬಂಧನ

ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್ ಅವರನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ...
ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್  (ಸಂಗ್ರಹ ಚಿತ್ರ)
ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್ ಅವರನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಮಹೇಂದ್ರ ಯಾದವ್ ಅವರು ದೆಹಲಿಯಲ್ಲಿ ಅಧಿಕಾರ ಹೊಂದಿರುವ ಆಮ್ ಪಕ್ಷದ ನಾಯಕರಾಗಿದ್ದು, ಇವರು ವಿಕಾಸ್ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

3 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿಲ್ಲ ಎಂದು ಹೇಳಿದ್ದ ಆಪ್ ಶಾಸಕ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ವೇಳೆ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಮಹೇಂದ್ರ ಯಾದವ್ ಅವರು ಹಲ್ಲೆ ಮಾಡಿದ್ದರು ಎಂದು ಹೇಳಲಾಗುತ್ತಿತ್ತು. ಇದೀಗ ಮಹೇಂದ್ರ ಯಾದವ್ ವಿರುದ್ಧ ಕ್ರಮ ಕೈಗೊಂಡಿರುವ ದೆಹಲಿ ಪೊಲೀಸರು ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವುದಾಗಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com