ಹೈದರಾಬಾದ್ ವಿವಿಯಲ್ಲಿ ರಾಹುಲ್ ಗಾಂಧಿ ಉಪವಾಸ ಸತ್ಯಾಗ್ರಹ

ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ಮೇಮುಲ ಆತ್ಮಹತ್ಯೆ ಖಂಡಿಸಿ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಎಐಸಿಸಿ ...
ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ
ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ
Updated on: 

ಹೈದರಾಬಾದ್: ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ಮೇಮುಲ ಆತ್ಮಹತ್ಯೆ ಖಂಡಿಸಿ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಾಥ್ ನೀಡಿದ್ದಾರೆ.

ಶುಕ್ರವಾರ ರಾತ್ರಿ 12.10ಕ್ಕೆ ವಿವಿಗೆ ಆಗಮಿಸಿದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿರುವವರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ತಾವು ಕೂಡ ವಿದ್ಯಾರ್ಥಿಗಳೊಂದಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
 
ಅತಿ ಚಿಕ್ಕ ವಯಸ್ಸಿನಲ್ಲೇ ರೋಹಿತ್ ವೇಮುಲ ಸಾವಿಗೆ ಶರಣಾಗಿದ್ದು, ಆತನ ಕನಸುಗಳೆಲ್ಲಾ ಸುಚ್ಚು ನೂರಾಗಿವೆ. ಆತನ ಸಾವಿಗೆ ತಾವು ನ್ಯಾಯ ದೊರಕಿಸಿಕೊಡಲು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಇನ್ನೂ ರಾಹುಲ್ ಗಾಂಧಿ ಹೈದರಾಬಾದ್ ವಿವಿಗೆ ಭೇಟಿ ನೀಡಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಎಬಿವಿಪಿ ಆಕ್ರೋಶ ವ್ಯಕ್ತ ಪಡಿಸಿದ್ದು, ತೆಲಂಗಾಣದಲ್ಲಿರುವ ಎಲ್ಲಾ ಕಾಲೇಜುಗಳನ್ನು ಮುಚ್ಚಿ ರಾಹುಲ್ ವಿರುದ್ಧ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಹೀಗಾಗಿ  ಹೈದರಾಬಾದ್ ವಿವಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ,

ವಿವಿ ಕುಲಪತಿ ಪ್ರೊ. ವಿಪಿನ್ ಶ್ರೀ ವಾಸ್ತವ ಮತ್ತು ಪಿ. ಅಪ್ಪಾ ರಾವ್ ಇಬ್ಬರು ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣರಾಗಿದ್ದಾರೆ. ಹೀಗಾಗಿ ಅವರಿಬ್ಬರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ರೋಹಿತ್ ವೇಮುಲ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ನೀಡುವುದರ ಜೊತೆಗೆ ಆತನ ಮನೆಯ ಒಬ್ಬ ಸದಸ್ಯನಿಗೆ ಸರ್ಕಾರಿ ಹುದ್ದೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com