
ಹೈದರಾಬಾದ್: ಕಾಪು ಘರ್ಜನ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕ್ರಿಮಿನಲ್ ನಂಬರ್ 1 ಸಂಚುಗಾರ ಮತ್ತು ಅಮಾನವೀಯ ವ್ಯಕ್ತಿ ಎಂದು ಕರೆದಿದ್ದಾರೆ.
ವಿಧಾನಸಭೆ ಚುನಾವಣೆ ವೇಳೆ ಚಂದ್ರಬಾಬು ನಾಯ್ಡು ಅವರು ಕಾಪು ಜನಾಂಗಕ್ಕೆ ಮೀಸಲಾತಿ ನೀಡುವುದಾಗಿ ಹೇಳಿದ್ದು, ಇದೀಗ ಅವರು ನೀಡಿದ ಭರವಸೆ ಈಡೇರಿಸದೇ ಮಾತು ತಪ್ಪಿದ್ದಾರೆ ಎಂದು ತೀವ್ರ ತರಾಟೆಗೆ ತೆಗದುಕೊಂಡಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಚಂದ್ರಬಾಬು ನಾಯ್ಡು ಅವರು ವೈಎಸ್ಆರ್ ಕಾಂಗ್ರೆಸ್ ವಿರುದ್ಧ ಬೊಟ್ಟು ಮಾಡಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ವೈಎಸ್ಆರ್ ಕಾಂಗ್ರೆಸ್ ಕಾರಣ. ಸರ್ಕಾರದ ವಿರುದ್ಧ ಕಾಪು ಜನಾಂಗವನ್ನು ತಿರುಗಿಬಿಳುವಂತೆ ಕೆರಳಿಸಿದ್ದಾರೆ ಎಂದು ಆರೋಪಿಸಿದ್ದರು.
ಕಾಪು ಜನಾಂಗವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ತುನ್ನಿ ಎಂಬಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
Advertisement