ಪಠಾಣ್ ಕೋಟ್ ದಾಳಿ: ಮತ್ತಷ್ಟು ಸಾಕ್ಷ್ಯಾಧಾರ ಕೇಳಿದ ಪಾಕಿಸ್ತಾನ

ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಕುರಿತಂತೆ ತನಿಖೆ ನಡೆಯುಸುತ್ತಿರುವ ಪಾಕಿಸ್ತಾನ ಇದೀಗ ದಾಳಿ ಕುರಿತಂತೆ ಮತ್ತಷ್ಟು ಸಾಕ್ಷ್ಯಾಧಾರ ಒದಗಿಸುವಂತೆ ಭಾರತವನ್ನು ಸೋಮವಾರ ಕೇಳಿದೆ...
ಪಠಾಣ್ ಕೋಟ್ ದಾಳಿ: ಮತ್ತಷ್ಟು ಸಾಕ್ಷ್ಯಾಧಾರ ಕೇಳಿದ ಪಾಕಿಸ್ತಾನ
ಪಠಾಣ್ ಕೋಟ್ ದಾಳಿ: ಮತ್ತಷ್ಟು ಸಾಕ್ಷ್ಯಾಧಾರ ಕೇಳಿದ ಪಾಕಿಸ್ತಾನ
Updated on: 

ಕರಾಚಿ: ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಕುರಿತಂತೆ ತನಿಖೆ ನಡೆಯುಸುತ್ತಿರುವ ಪಾಕಿಸ್ತಾನ ಇದೀಗ ದಾಳಿ ಕುರಿತಂತೆ ಮತ್ತಷ್ಟು ಸಾಕ್ಷ್ಯಾಧಾರ ಒದಗಿಸುವಂತೆ ಭಾರತವನ್ನು ಸೋಮವಾರ ಕೇಳಿದೆ.

ಈ ಬಗ್ಗೆ ಪಾಕಿಸ್ತಾನದ ಖಾಸಗಿ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದು, ಪಠಾಣ್ ಕೋಟ್ ಮೇಲೆ ದಾಳಿ ಕುರಿತಂತೆ ಪಾಕಿಸ್ತಾನಕ್ಕೆ ಭಾರತ ಒದಗಿಸಿದ್ದ ಉಗ್ರರು ಬಳಸಿದ್ದ ಮೊಬೈಲ್ ಸಂಖ್ಯೆಗಳು ತನಿಖೆಯನ್ನು ಈಗಾಗಲೇ ಅಧಿಕಾರಿಗಳು ಪೂರ್ಣಗೊಳಿಸಿದ್ದು, ಮೊಬೈಲ್ ಸಂಖ್ಯೆಗಳು ನೋಂದಣಿಯಾಗಿರದ ಸಂಖ್ಯೆಗಳಾಗಿದ್ದು, ನಕಲಿ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆಂದು ಹೇಳಿದೆ. ಅಲ್ಲದೆ, ಪ್ರಕರಣದ ತನಿಖೆಗೆ ಮತ್ತಷ್ಟು ಸಾಕ್ಷ್ಯಾಧಾರದ ಅಗತ್ಯವಿದೆ. ಈ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಲ್ಲಿ ಹೇಳಿಕೊಂಡಿದೆ.

ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಹಿಂದೆ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಕೈವಾಡವಿದೆ ಎಂದು ಭಾರತ ಆರೋಪವ್ಯಕ್ತಪಡಿಸಿತ್ತು. ಅಲ್ಲದೆ, ಈ ಬಗ್ಗೆ ಪ್ರಮುಖ ಸಾಕ್ಷ್ಯಾಧಾರಗಳನ್ನು ಪಾಕಿಸ್ತಾನಕ್ಕೆ ಒದಗಿಸಿತ್ತು. ಹೀಗಾಗಿ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ನಿರ್ಧಾರ ಕೈಗೊಂಡ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರು, 6 ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡವೊಂದನ್ನು ನೇಮಕ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com