"ಕಾಪು ಘರ್ಜನ" ವೇಳೆ ರೈಲಿಗೆ ಬೆಂಕಿ; ದುಷ್ಕರ್ಮಿಗಳ ಸೆರೆಗೆ ಪೊಲೀಸರ ಶೋಧ

"ಕಾಪು ಘರ್ಜನ" ಪ್ರತಿಭಟನೆ ವೇಳೆ ರೈಲಿಗೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ ಬಂಧನಕ್ಕೆ ಆಂಧ್ರ ಪ್ರದೇಶ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ...
ಪ್ರತಿಭಟನಾಕಾರರ ಆಕ್ರೋಶಕ್ಕೆ ತುತ್ತಾದ ರತ್ನಾಂಚಲ ಎಕ್ಸ್ ಪ್ರೆಸ್ ರೈಲು
ಪ್ರತಿಭಟನಾಕಾರರ ಆಕ್ರೋಶಕ್ಕೆ ತುತ್ತಾದ ರತ್ನಾಂಚಲ ಎಕ್ಸ್ ಪ್ರೆಸ್ ರೈಲು

ಅಮರಾವತಿ: "ಕಾಪು ಘರ್ಜನ" ಪ್ರತಿಭಟನೆ ವೇಳೆ ರೈಲಿಗೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ ಬಂಧನಕ್ಕೆ ಆಂಧ್ರ ಪ್ರದೇಶ ಪೊಲೀಸರು ಶೋಧ  ಕಾರ್ಯ ನಡೆಸುತ್ತಿದ್ದಾರೆ.

ಬೆಂಕಿ ಹಚ್ಚಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ  ಸೂಚಿಸಿತ್ತು. ಸರ್ಕಾರದ ಆದೇಶದಂತೆ ಇಂದು ಕ್ರಮ ಕೈಗೊಂಡಿರುವ ಆಂಧ್ರ ಪ್ರದೇಶ ಪೊಲೀಸರು ರೈಲು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳಿಗಾಗಿ  ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಿನ್ನೆಯಿಂದಲೇ ತುನಿಯಲ್ಲಿ ಮೊಕ್ಕಾಂ ಹೂಡಿರುವ ಪೊಲೀಸ್ ವರಿಷ್ಠಾಧಿಕಾರಿಗಳು, ಇಂದು ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದರು. ಮೂಲಗಳು  ತಿಳಿಸಿರುವಂತೆ ಆರೋಪಿಗಳ ಪತ್ತೆಗಾಗಿ ಟಿವಿ ವಾಹಿನಿಗಳ ವಿಡಿಯೋಗಳನ್ನು ಕೂಡ ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಹಾಯಕ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆರ್ ಒ ಠಾಕೂರ್ ಅವರು, ಹಿಂಸಾಚಾರ ಸೃಷ್ಟಿಸಿದ  ಯಾವೊಬ್ಬರನ್ನೂ ಬಿಡುವುದಿಲ್ಲ. ಕಾನೂನಿನಡಿಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ವಶಪಡಿಸಿಕೊಂಡಿರುವ ವಿಡಿಯೋಗಳ ಸಹಾಯದಿಂದ  ದುಷ್ಕರ್ಮಿಗಳನ್ನು ಗುರುತಿಸು ಕಾರ್ಯ ಸಾಗುತ್ತಿದ್ದು, ಆರೋಪಿಗಳ ವಿರುದ್ಧ ಈಗಾಗೇಲ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ  ಘಟನಾ ಸ್ಥಳದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸರ್ಕಾರದ ಮುಂದಿನ ಆದೇಶ ಬರುವವರೆಗೂ ಇದು  ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದರು.

ನಿನ್ನೆ ಕಾಪು ಜನಾಂಗವನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ "ಕಾಪು ಐಕ್ಯ ಘರ್ಜನ" ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ  ಪರಿಣಾಮ ಪ್ರತಿಭಟನಾಕಾರರು, ತುನಿ ರೈಲ್ವೇ ನಿಲ್ದಾಣದಲ್ಲಿದ್ದ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದರು. ಅಲ್ಲದೆ ಪರಿಸ್ಥಿತಿ ನಿಯಂತ್ರಣಕ್ಕೆ ಆಗಮಿಸಿದ್ದ  ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ ಪ್ರತಿಭಟನಾಕಾರರು 20 ಪೊಲೀಸ್ ವಾಹನಗಳಿಗೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ  ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com