ಮುಂಬೈ ರೀತಿ ಢಾಕಾದ ಮೇಲೆ ಉಗ್ರ ದಾಳಿ: 35ಕ್ಕೂ ಹೆಚ್ಚು ಮಂದಿ ಒತ್ತೆ

ಬಾಂಗ್ಲಾದೇಶದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ...
ಉಗ್ರ ದಾಳಿ
ಉಗ್ರ ದಾಳಿ
Updated on

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ವಿದೇಶಿಯರೇ ಹೆಚ್ಚಾಗಿ ಉಳಿದುಕೊಳ್ಳುವ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿರುವ ಉಗ್ರರು 35ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಉಗ್ರರ ದಾಳಿ ಹಿನ್ನೆಲೆ ರೆಸ್ಟೋರೆಂಟ್ ಸುತ್ತುವರೆದಿರುವ ಬಾಂಗ್ಲಾದೇಶ ಭದ್ರತಾ ಪಡೆ ಉಗ್ರರ ಧಮನಕ್ಕೆ ಮುಂದಾಗಿದ್ದಾರೆ.

ಉಗ್ರರ ಧಮನ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿಯಿಂದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿತ್ತು.

ಕಾರ್ಯಾಚರಣೆ ವೇಳೆ ಇಬ್ಬರು ಬಾಂಗ್ಲಾದೇಶಿಗರನ್ನು ರಕ್ಷಿಸಲಾಗಿದ್ದು ಅವರ ವಿವರಗಳು ಇನ್ನು ಲಭಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com