
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜುಲೈ.7 ರಿಂದ ಆಫ್ರಿಕಾದ ನಾಲ್ಕು ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಜುಲೈ.1 ರಂದು ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳಾಪಟ್ಟಿ ನಿಗದಿಯಾಗಿದ್ದು, ಆಫ್ರಿಕಾದ ದಕ್ಷಿಣ ಆಫ್ರಿಕಾ, ಮೊಜಾಂಬಿಕ್, ಟಾಂಜಾನಿಯಾ ಮತ್ತು ಕೀನ್ಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ.
ಮೊದಲು ಮೊಜಾಂಬಿಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಜು.8, 9 ರಂದು ಅಲ್ಲಿನ ಅಧ್ಯಕ್ಷ ಜಾಕೋಬ್ ಝೂಮಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಉಭಯ ದೇಶಗಳ ನಡುವಿನ ಸಂಬಂಧವನ್ನು ಉತ್ತಮಗೊಳಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಬ್ರಿಕ್ಸ್, ಐಬಿಎಸ್ಎ, ಜಿ-20, ಬಿಎಎಸ್ ಐಸಿಯಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ ಉತ್ತಮ ಸಹಕಾರ ನೀಡಿದ್ದು ಜೊಹಾನ್ಸ್ ಬರ್ಗ್ ಪೀಟರ್ಮಾರಿಟ್ಜ್ ಬರ್ಗ್ ಮತ್ತು ಡರ್ಬನ್ ಗೂ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಜುಲೈ 11 ರಂದು ಕಿನ್ಯಾ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ನೈರೋಬಿ ವಿವಿಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
Advertisement