ಕ್ಯಾಬಿನೆಟ್ ದರ್ಜೆಗೆ ಮುಂಬಡ್ತಿ ಬಗ್ಗೆ ಜಾವಡೇಕರ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದ ಪ್ರಧಾನಿ!

ರಾಜ್ಯ ಸಚಿವರಾಗಿದ್ದ ಪ್ರಕಾಶ್ ಜಾವ್ಡೇಕರ್ ಗೆ ಸಂಪುಟ ದರ್ಜೆಗೆ ಬಡ್ತಿ ನೀಡುವ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಕಾಶ್ ಜಾವ್ಡೇಕರ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಂತೆ.
ಪ್ರಕಾಶ್ ಜಾವ್ಡೇಕರ್
ಪ್ರಕಾಶ್ ಜಾವ್ಡೇಕರ್
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ರಾಜ್ಯ ಸಚಿವರಾಗಿದ್ದ ಪ್ರಕಾಶ್ ಜಾವ್ಡೇಕರ್ ಗೆ ಸಂಪುಟ ದರ್ಜೆಗೆ ಬಡ್ತಿ ನೀಡುವ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಕಾಶ್ ಜಾವ್ಡೇಕರ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಂತೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಕಾಶ್ ಜಾವ್ಡೇಕರ್, ನಾನು ಹವಾಮಾನ ಬದಲಾವಣೆ ಕುರಿತಾದ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಬರ್ಲಿನ್ ಗೆ ತೆರಳಿದ್ದೆ. ಈ ವೇಳೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ಹಾಗೂ ಅರಣ್ಯ ಖಾತೆ ರಾಜ್ಯ ಸಚಿವ ಸ್ಥಾನದಿಂದ ಸಂಪುಟ ದರ್ಜೆಗೆ ಬಡ್ತಿ ನೀಡುವ ಬಗ್ಗೆ ಮಾಹಿತಿ ನೀಡಿ ದೆಹಲಿಗೆ ವಾಪಸ್ಸಾಗುವಂತೆ ಸೂಚಿಸಿದರು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕರೆ ಮಾಡುವುದಕ್ಕೂ ಮುನ್ನ ಬಡ್ತಿ ಸಿಗುವ ಬಗ್ಗೆ ಸುಳಿವು ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ ನಂತರ ಬರ್ಲಿನ್ ನಿಂದ ಅಬುದಾಬಿ ಮೂಲಕ ದೆಹಲಿಗೆ ಆಗಮಿಸಿದೆ ಎಂದು ಜಾವಡೇಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com