ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ವಿರುದ್ಧ ಶಿವಸೇನೆ ಅಸಮಾಧಾನ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎನ್ ಡಿಎ ಮೈತ್ರಿಕೂಟದ ಮಿತ್ರ ಪಕ್ಷ ಶಿವಸೇನೆ ಅಸಮಾಧಾನ...
ಶಿವಸೇನೆಯ ಮುಖಂಡ ಸಂಜಯ್ ರಾವುತ್
ಶಿವಸೇನೆಯ ಮುಖಂಡ ಸಂಜಯ್ ರಾವುತ್
Updated on: 

ಮುಂಬೈ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎನ್ ಡಿಎ ಮೈತ್ರಿಕೂಟದ ಮಿತ್ರ ಪಕ್ಷ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಸಚಿವ ಸಂಪುಟ ವಿಸ್ತರಣೆಯೇ ಹೊರತು ಎನ್ ಡಿಎಯದ್ದಲ್ಲ ಎಂದು ಟೀಕಿಸಿದೆ.

ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ತನಗೆ ಅಸಮಾಧಾನ ಇಲ್ಲ ಎಂದು ಶಿವಸೇನೆ ಹೇಳಿದ್ದರೂ, ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ವೇಳೆ ಏಕಪಕ್ಷೀಯ ನಿರ್ಧಾರ ಕೈಗೊಂಡು ಕೇವಲ ಬಿಜೆಪಿಯ ಸಂಸದರಿಗಷ್ಟೇ ಸಚಿವ ಸ್ಥಾನ ನೀಡಿದ್ದಾರೆ ಎಂದು ಶಿವಸೇನೆ
ಯ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

ಮಹಾರಾಷ್ಟ್ರ ಹಾಗೂ ಪಕ್ಷದ ಘನತೆಯನ್ನು ಕಾಪಾಡಿಕೊಳ್ಳುವುದು ಶಿವಸೇನೆಯ ಆದ್ಯತೆಯೇ ಹೊರತು ಅಧಿಕಾರಕ್ಕಾಗಿ ಆತ್ಮಗೌರವವನ್ನು ಕಳೆದುಕೊಳ್ಳಲು ಸಿದ್ಧವಿಲ್ಲ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪ್ರಧಾನಿಯವರ ಏಕಪಕ್ಷೀಯ ನಿರ್ಧಾರವಾಗಿದ್ದು ಬಿಜೆಪಿಗೆ ಮಾತ್ರ ಸೀಮಿತವಾಗಿದೆ. ಅದು ಎನ್ ಡಿ ಎ ಸಚಿವ ಸಂಪುಟ ವಿಸ್ತರಣೆಯಲ್ಲ ಎಂದು ಸಂಜಯ್ ರಾವುತ್ ತಿಳಿಸಿದ್ದಾರೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ರಾಮ್ ದಾಸ್ ಅಠಾವಳೆ ರಾಜ್ಯಸಭೆ ಮೂಲಕ ಬಿಜೆಪಿಗೆ ಬಂದವರು. ಅನುಪ್ರಿಯಾ ಪಟೇಲ್ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಬಿಜೆಪಿ ಅಖಾಲಿ ದಳವನ್ನಾಗಲಿ, ತೆಲುಗು ದೇಶಂ ಪಕ್ಷದವರನ್ನಾಗಿ ಅಹವಾನಿಸುವುದಿಲ್ಲ. ಹಾಗೆಯೇ ಸಚಿವ ಸಂಪುಟ ವಿಸ್ತರಣೆಯ ಭಾಗವಾಗದೆ ಇರುವುದಕ್ಕೆ ಶಿವಸೇನೆಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸಂಜಯ್ ರಾವುತ್ ಮಾರ್ಮಿಕವಾಗಿ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ್ದ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ, ತಮ್ಮ ಪಕ್ಷ ಸಚಿವ ಸ್ಥಾನಕ್ಕಾಗಿ ಮನವಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com