ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.
ತಿರುವನಂತಪುರ ಸಂಸದ ಶಶಿ ತರೂರ್ ಅವರು ಈ ಹಿಂದೆ ಹಲವು ಬಾರಿ ಮೋದಿಯವರನ್ನು ಹೊಗಳಿದ್ದಾರೆ. ಈ ಬಾರಿ ಮೊಜಾಂಬಿಕಾದಿಂದ ದಿರ್ಘಾವಧಿಗೆ ತೊಗರಿ ಬೆಳೆಯನ್ನು ಆಮದು ಮಾಡಿಕೊಳ್ಳುವ ಪ್ರಧಾನಿ ಮೋದಿ ಅವರ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.
ಮೊಜಾಂಬಿಕಾದಿಂದ ತೊಗರಿ ಬೆಳೆ ಆಮದು ಮಾಡಿಕೊಳ್ಳಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿತ್ತು. ಟ್ವೀಟರ್ ಹರಿಶ್ ಎಂಬುವವರು ಕೇಂದ್ರ ಈ ನಿರ್ಧಾರವನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಅಲ್ಲದೆ ಮೇಕ್ ಇನ್ ಇಂಡಿಯಾ ಕೃಷಿ ಬಗ್ಗೆಯೂ ಗಮನ ಹರಿಸಬೇಕು ಎಂದಿದ್ದರು.
ಹರೀಶ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ತರೂರ್, ಖಂಡಿತ ನಾವು ಬೆಳೆ ಬೆಳೆಯಬೇಕು ನಿಜ. ಆದರೆ ಆಹಾರ ಭದ್ರತೆ ಬಹಳ ಮಹತ್ವದ್ದು. ಚೀನಾ ಸಹ ಇದನ್ನೆ ಮಾಡುತ್ತಿದೆ ಎಂದು ಹೇಳಿದ್ದಾರೆ.