ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಆಮ್ ಆದ್ಮಿ ಪಕ್ಷದ ಶಾಸಕನ ಬಂಧನ

ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಆಮ್ ಆದ್ಮಿ ಪಕ್ಷದ ದೆಹಲಿ ಶಾಸಕ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಶಾಸಕ
ಆಮ್ ಆದ್ಮಿ ಪಕ್ಷದ ಶಾಸಕ
Updated on

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಆಮ್ ಆದ್ಮಿ ಪಕ್ಷದ ದೆಹಲಿ ಶಾಸಕ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದಾರೆ.

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಪ್ರಕಾಶ್ ಜರ್ವಾಲ್ ವಿರುದ್ಧ ಗ್ರೇಟರ್ ಕೈಲಾಶ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸೆಕ್ಷನ್ 354, 506, 509 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆಮ್ ಆದ್ಮಿ ಪಕ್ಷದ ಶಾಸಕ ಪ್ರಕಾಶ್ ಜರ್ವಾಲ್ ವಿರುದ್ಧ ಆರೋಪ ಕೇಳಿಬಂದಿರುವುದು ಇದೆ ಮೊದಲಲ್ಲ. ಈ ಹಿಂದೆ 2014 ರ ಮೇ ತಿಂಗಳಲ್ಲಿ ದೆಹಲಿ ಜಲಮಂಡಳಿಯ ಇಂಜಿನಿಯರ್ ಗೆ ಥಳಿಸಿದ್ದ ಆರೋಪ ಅಡಿಯಲ್ಲಿ ಪ್ರಕಾಶ್ ಜರ್ವಾಲ್ ಬಂಧನಕ್ಕೊಳಗಾಗಿದ್ದರು.

ಆಮ್ ಆದ್ಮಿ ಪಕ್ಷದ ನಾಯಕನೊಬ್ಬ ಪಂಜಾಬ್ ನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಸಿಖ್ ಸಮುದಾಯದ ಪವಿತ್ರ ಗ್ರಂಥ ಗುರುಗ್ರಂಥ ಸಾಹಿಬ್ ಗೆ ಹೋಲಿಕೆ ಮಾಡಿ ವಿವಾದಕ್ಕೀಡಾದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ ಆರೋಪವೂ ಕೇಳಿಬಂದಿದೆ. ಆಮ್ ಆದ್ಮಿ ಪಕ್ಷದ ಶಾಸಕರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬರುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ, ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕಳೆದುಕೊಳ್ಳುವ ಭಯದಿಂದ ಬಿಜೆಪಿ ತನ್ನ ವಿರುದ್ಧ ಆರೋಪ ಮಾಡುತ್ತಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com