ಶೀಘ್ರವೇ ಕಳಚಿ ಬೀಳಲಿದೆ ಅಲೀಘರ್ ಮುಸ್ಲಿಂ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನ
ನವದೆಹಲಿ: ಅಲಿಘರ್ ಮುಸ್ಲಿಂ ವಿವಿಯನ್ನು ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯ ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು ಶೀಘ್ರವೇ ಅಲಿಘರ್ ವಿಶ್ವವಿದ್ಯಾನಿಲಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕಳೆದುಕೊಳ್ಳಲಿದೆ.
ಮಾನವ ಸಂಪನ್ಮೂಲ ಇಲಾಖೆ ಅಲಿಘರ್ ವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತ ಸ್ಥಾನಮಾನವನ್ನು ಬೆಂಬಲಿಸಿದ್ದ ಪತ್ರಗಳನ್ನು ವಾಪಸ್ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರ ಅಲಹಾಬಾದ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿದ್ದ ರೀತಿಯಲ್ಲೇ ಅಲಿಘರ್ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಸಹ ಸುಪ್ರೀಂ ಕೋರ್ಟ್ ಗೆ ಪ್ರೇತ್ಯೇಕವಾದ ಅರ್ಜಿಯನ್ನು ಸಲ್ಲಿಸಿದೆ.
ಅಲಿಘರ್ ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಸ್ಪಷ್ಟನೆ ನೀಡಿದ್ದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, ಅಲಿಘರ್ ವಿಶ್ವವಿದ್ಯಾನಿಲಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ವಾಪಸ್ ಪಡೆಯಲಿದ್ದೇವೆ ಎಂದು ಹೇಳಿದ್ದರು. ಅಲಿಘರ್ ವಿವಿಯನ್ನು ಸ್ಥಾಪಿಸಿರವುದು ಸರ್ಕಾರವಾದ್ದರಿಂದ ಅದನ್ನು ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯ ಎಂದು ಹೇಳಲು ಸಾಧ್ಯವಿಲ್ಲ ಎಂದು 1967 ರ ಕೋರ್ಟ್ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆದ್ದರಿಂದ ಅಲಿಘರ್ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಮುಕುಲ್ ರೋಹಟಗಿ ತಿಳಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ