ಫಿಲಿಭಿತ್: 2009ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ಬಿಜೆಪಿ ಸಂಸದ ವರುಣ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ವರುಣ್ ಗಾಂಧಿ ಜಿಲ್ಲಾ ನ್ಯಾಯಾಧೀಶ ಕೌಟಿಲ್ಯ ಕುಮಾರ್ ಗೌರ್ ಅವರು ಲೋಕಸಭಾ ಸ್ಪೀಕರ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ.
ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ನಿಗದಿ ಮಾಡಿದ್ದು, ಅಂದು ವಿಚಾರಣೆಗೆ ಹಾಜರಾಗುವಂತೆ ವರುಣ್ ಗಾಂಧಿಗೆ ಸೂಚಿಸಲಾಗಿದೆ.
ವರುಣ್ ಗಾಂಧಿ ಅವರು 2009ರ ಲೋಕಸಭೆ ಚುನಾವಣೆ ವೇಳೆ ಸಾರ್ವಜನಿಕ ಸಭೆಯೊಂದರಲ್ಲಿ ಒಂದು ನಿರ್ಧಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.