ಕಾಶ್ಮೀರ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರವನ್ನು ಖಂಡಿಸಿದ ಸಿಪಿಐ(ಎಂ)

ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವಾರ ಮೇಲೆ ಲಾಠಿ ಪ್ರಹಾರ ಹಾಗೂ ಎನ್ ಕೌಂಟರ್ ಮಾಡಿರುವುದನ್ನು ಸಿಪಿಐ(ಎಂ) ಖಂಡಿಸಿದೆ.
ಸಿಪಿಐ(ಎಂ)
ಸಿಪಿಐ(ಎಂ)
Updated on: 

ನವದೆಹಲಿ: ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವಾರ ಮೇಲೆ ಲಾಠಿ ಪ್ರಹಾರ ಹಾಗೂ ಎನ್ ಕೌಂಟರ್ ಮಾಡಿರುವುದನ್ನು ಸಿಪಿಐ(ಎಂ) ಖಂಡಿಸಿದೆ.

ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿ 20 ಜನರ ಸಾವಿಗೆ ಕಾರಣವಾಗಿರುವವರನ್ನು ಶಿಕ್ಷಿಸಬೇಕು ಎಂದು ಸಿಪಿಐ (ಎಂ) ಆಗ್ರಹಿಸಿದೆ. ನಿಶಸ್ತ್ರರಾದ ಯುವಕರ ಮೇಲೆ ಸೇನೆ ಹಾಗೂ ಪೊಲೀಸರು ಅಮಾನವೀಯವಾಗಿ ದಾಳಿ ಮಾಡಿರುವುದು ಖಂಡನೀಯವಾಗಿದೆ. ಪ್ರತಿಭಟನಾಕಾರರ ಮೇಲೆ ಹೆಚ್ಚಿನ ಶಕ್ತಿಯನ್ನು ಪ್ರಯೋಗಿಸುವುದನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಅಮಾಯಕ ಪ್ರತಿಭಟನಾಕಾರರ ಸಾವಿಗೆ ಕಾರಣವಾದವರನ್ನು ಗುರುತಿಸಿ ಕೂಡಲೇ ಬಂಧಿಸಬೇಕು ಎಂದು ಸಿಪಿಐ(ಎಂ) ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಮನವಿ ಮಾಡಿದೆ.

ಸೇನೆಯ ಶಕ್ತಿ ಪ್ರಯೋಗದಿಂದ ಕಾಶ್ಮೀರದ ಪರಿಸ್ಥಿತಿ ಹದಗೆಡುತ್ತಿದ್ದು, 20 ಕ್ಕೂ ಹೆಚ್ಚು  ಜನರು ಮೃತಪಟ್ಟಿದ್ದರೆ, ನೂರಾರು ಜನರು ಗಾಯಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಉಗ್ರವಾದವನ್ನು ನಿಗ್ರಹಿಸುವುದು ಅಗತ್ಯವಾಗಿದೆ, ಆದರೆ ಅದನ್ನೇ ಪ್ರಧಾನ ಕಾರಣವಾಗಿಟ್ಟುಕೊಂಡು ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡುವುದು ಸೂಕ್ತವಲ್ಲ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿಯನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದನ್ನು ವಿರೋಧಿಸಿ ಕಾಶ್ಮೀರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com