
ನವದೆಹಲಿ: ಹಿಜಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿಯ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನದ ಹೇಳಿಕೆಗೆ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿರುಗೇಟು ನೀಡಿದ್ದಾರೆ.
ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಹಕ್ಕು ಯಾರಿಗೂ ಇಲ್ಲ, ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕ್ರಮ ಕೈಗೊಳ್ಳುವ ಅಧಿಕಾರ ಸೇನೆಗೆ ಇದೆ. ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಉಂಟಾಗಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಹಾಗೂ ಪ್ರಾಣಹಾನಿಯನ್ನು ತಪ್ಪಿಸಬೇಕೆಂದರೆ ಸೇನೆ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದರ ಬಗ್ಗೆ ಆಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ. ಒಂದು ವೇಳೆ ಸೇನೆಯ ಕ್ರಮವನ್ನು ಪ್ರಶ್ನಿಸಬೇಕೆಂದರೆ ಅದಕ್ಕೆ ಸುಪ್ರೀಂಕೋರ್ಟ್ ಹಾಗೂ ಮಾನವ ಹಕ್ಕುಗಳ ಆಯೋಗ ಇದೆ ಆದರೆ, ದೇಶದ ಹೊರಗಿನವರು ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರದಲ್ಲಿ ಉಗ್ರನ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನ, ಉಗ್ರ ಮುಜಾಫರ್ ವಾನಿಯ ಹಾಗೂ ಇತರ ಕಾಶ್ಮೀರಿ ಯುವಕರ ಹತ್ಯೆ ಶೋಚನೀಯವಾದದ್ದು ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖುರ್ಷಿದ್ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
Advertisement