10 ಲಕ್ಷ ಬ್ಯಾಂಕ್ ನೌಕರರಿಂದ ಜು.29ರಂದು ಮುಷ್ಕರ

ಬ್ಯಾಂಕಿಂಗ್ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಜುಲೈ 29ರಂದು ಮುಷ್ಕರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ಬ್ಯಾಂಕಿಂಗ್ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಜುಲೈ 29ರಂದು ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ(ಎಐಬಿಇಎ) ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ.
ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳ ಸದಸ್ಯತ್ವವನ್ನು ಹೊಂದಿರುವ ಬ್ಯಾಂಕ್ ಒಕ್ಕೂಟಗಳ ವೇದಿಕೆ ಮುಷ್ಕರಕ್ಕೆ ಕರೆ ನೀಡಿದ್ದು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಹೇಳಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು, ಹಳೆಯ ಖಾಸಗಿ ಬ್ಯಾಂಕ್ ಗಳ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ವಿದೇಶಗಳ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ ಗಳ ನೌಕರರು ಈ ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವೆಂಕಟಾಚಲಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಒಕ್ಕೂಟಗಳ ವೇದಿಕೆ ಈ ಸಂಬಂಧ ಈಗಾಗಲೇ ಎಲ್ಲಾ ಭಾರತೀಯ ಬ್ಯಾಂಕ್ ಒಕ್ಕೂಟಗಳಿಗೆ ನೋಟಿಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com