ದೆಹಲಿ ಕಿಡ್ನಿ ರಾಕೆಟ್ ಪ್ರಕರಣ: ಅಪೋಲೋ ಆಸ್ಪತ್ರೆ 2 ಹಿರಿಯ ವೈದ್ಯರ ವಿಚಾರಣೆ

ಕೆಲ ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಬಯಲಾಗಿದ್ದ ಕಿಡ್ನಿ ರಾಕೆಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಅಪೋಲೋ ಆಸ್ಪತ್ರೆಯ ಇಬ್ಬರು ಹಿರಿಯ ವೈದ್ಯರನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಬಯಲಾಗಿದ್ದ ಕಿಡ್ನಿ ರಾಕೆಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಅಪೋಲೋ ಆಸ್ಪತ್ರೆಯ ಇಬ್ಬರು ಹಿರಿಯ ವೈದ್ಯರನ್ನು ಬುಧವಾರ ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಇಬ್ಬರು ವೈದ್ಯರಿಗೆ ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಸೆಕ್ಷನ್ ಸಿಆರ್ ಪಿಸಿ 160 ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದರು.

ಅಶೋಕ್ ಸರಿನ್ ಮತ್ತು ಡಿ.ಕೆ. ಅಗರ್ವಾಲ್ ಅಪೋಲೋ ಆಸ್ಪತ್ರೆಯಲ್ಲಿ ನೆಫ್ರೋ ಯುರಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ವಿಶೇಷ ತನಿಖಾ ತಂಡ ಇಬ್ಬರನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಹಿರಿಯ ವೈದ್ಯರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದ್ದು, ಆಸ್ಪತ್ರೆಯ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಅಕ್ರಮ ಕಿಡ್ನಿ ಮಾರಾಟ ಜಾಲ ಪ್ರಕರಣ ಕುರಿತಂತೆ ಈಗಾಗಲೇ ಪೊಲೀಸರು 2 ಎಫ್ಐಆರ್ ಗಳನ್ನು ದಾಖಲಿಸಿಕೊಂಡಿದ್ದು, ವೈದ್ಯರ ಸಹಾಯಕರು, ಮಧ್ಯವರ್ತಿಗಳು, ಕಿಂಗಿ ಪಿನ್ ರಾಜಕುಮಾರ್ ರಾವ್, ಕೆಲ ದಾನಿಕರು ಸೇರಿದಂತೆ 13 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com