
ನವದೆಹಲಿ: ಉತ್ತರ ಪ್ರದೇಶ 2017ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುವ ಮೂಲಕ ಪಕ್ಷ ನನಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ, ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ಗುರುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನನ್ನ ಮೇಲೆ ನಂಬಿಕೆಯಿಟ್ಟು ಇಷ್ಟೊಂದು ದೊಡ್ಡ ಜವಾಬ್ದಾರಿಯನ್ನು ನೀಡಿರುವುದಕ್ಕೆ ಪಕ್ಷದ ಹೈ ಕಮಾಂಡ್ ಗೆ ಧನ್ಯವಾದ ಸೂಚಿಸುತ್ತೇನೆ. ಕೊಟ್ಟಿರುವ ಜವಾಬ್ದಾರಿ ಅತ್ಯಂತ ಕಠಿಣವಾದದ್ದು, ಆದರೆ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸಾಕಷ್ಟು ವಿಶ್ವಾಸದೊಂದಿಗೆ ಉತ್ತರ ಪ್ರದೇಶದ ಚುನಾವಣೆಯಲ್ಲಿ ಸ್ಪರ್ಧಿಸಲು ಹೋಗುತ್ತಿದ್ದೇವೆ. ಉತ್ತರ ಪ್ರದೇಶದಲ್ಲಿ ಎಸ್ ಪಿ, ಬಿಎಸ್ ಪಿ, ಬಿಜೆಪಿ ಪಕ್ಷಗಳೊಂದಿಗೆ ಕಾಂಗ್ರೆಸ್ ಕೂಡ ಸ್ಪರ್ಧೆಗೆ ನಿಲ್ಲುತ್ತಿದೆ. ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.
Advertisement