ಐಐಟಿ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭ

ಐಐಟಿ ಶುಲ್ಕದಲ್ಲಿ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ತೊಂದರೆಯಾಗುವುದನ್ನು...
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್
ನವದೆಹಲಿ: ಐಐಟಿ ಶುಲ್ಕದಲ್ಲಿ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಬಹುದೊಡ್ಡ ನಿರಾಳತೆ ನೀಡಿರುವ ಕೇಂದ್ರ ಸರ್ಕಾರ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಡ್ಡಿರಹಿತ ಸಾಲ ನೀಡಲು ಮುಂದಾಗಿದೆ. ಈ ಕುರಿತ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಿನ್ನೆ ಅನುಮೋದನೆ ನೀಡಿದೆ. 
ಐಐಟಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಟುಂಬದವರ ವಾರ್ಷಿಕ ಆದಾಯ 9 ಲಕ್ಷಕ್ಕಿಂತ ಕೆಳಗಿದ್ದರೆ ಸರ್ಕಾರದ ವಿನಾಯಿತಿ ಸಿಗುತ್ತದೆ.
ಐಐಟಿ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಯಾವುದೇ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಶುಲ್ಕ ಹೆಚ್ಚಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸೌಲಭ್ಯ ಪದವಿ ಮತ್ತು ಐದು ವರ್ಷಗಳ ಆಂತರಿಕ ಪದವಿ ಕೋರ್ಸ್ ಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಸಾಲದ ಮೇಲಿನ ಬಡ್ಡಿ ವಿನಾಯ್ತಿ ಐದು ವರ್ಷಗಳವರೆಗೆ ವಿದ್ಯಾರ್ಥಿಗಳಿಗೆ ಸಿಗುತ್ತದೆ. ಶೈಕ್ಷಣಿಕ ಸಾಲ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಮಾತ್ರ ಒಳಗೊಳ್ಳುತ್ತದೆ. ಮಾನವ ಸಂಪನ್ಮೂಲ ಇಲಾಖೆಯ ಈ ಪ್ರಸ್ತಾವನೆಗೆ ಹಣಕಾಸು ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಅಧಿಕಾರಿ ವಿವರಿಸಿದ್ದಾರೆ. 
ಹಿಂದಿನ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರ ಅಧಿಕಾರಾವಧಿಯಲ್ಲಿ ಐಐಟಿ ಶುಲ್ಕವನ್ನು 90 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. 
ಆದರೆ ಎಸ್ ಸಿ/ ಎಸ್ ಟಿ, ವಿಕಲಾಂಗರು, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶುಲ್ಕದಲ್ಲಿ ವಿನಾಯ್ತಿ ಇದೆ. ಸಾಮಾನ್ಯ ವರ್ಗದ ಬಡ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಹೊಸ ಸೌಲಭ್ಯ ನೆರವಿಗೆ ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com